ಲಿಟ್ಲ್ ಫ್ಲವರ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ದರ್ಬೆ ಲಿಟ್ಲ್‌ ಫ್ಲವರ್ ಹಿ.ಪ್ರಾ ಶಾಲೆಯಲ್ಲಿ ಆ.15ರಂದು ದೇಶದ 77 ಸ್ಚಾತಂತ್ರ್ಯೋತ್ಸವವನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ರಾಮಚಂದ್ರ ಭಟ್ ದ್ವಜರೋಹಣ ನೆರವೇರಿಸುವ ಮೂಲಕ ಆಚರಿಸಿದರು.


ಶಾಲಾ ಮುಖ್ಯ ಶಿಕ್ಷಕಿ ಭಗಿನಿ ವೆನಿಶಾ ಬಿ.ಎಸ್ ಅಧ್ಯಕ್ಷತೆ ವಹಿಸಿದ್ದರು. ನಿವೃತ ಶಿಕ್ಷಕಿ ಮೇರಿ ಡಿಸಿಲ್ವ ಹಾಗೂ ಸುರಕ್ಷಾ ಸಮಿತಿ ಅಧ್ಯಕ್ಷ ಸತೀಶ್ ಆರ್ ಉಪಸ್ಥಿತರಿದ್ದರು. ಬಳಿಕ ನಡೆದ ಸಭಾ ಕಾರ್ಯಕ್ರಮವನ್ನು ಶಾಲಾ ನಿವೃತ ಶಿಕ್ಷಕಿ ಮೇರಿ ಡಿಸಿಲ್ವ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕತಿಕ ಕಾರ್ಯಕ್ರಮ ನೆರವೇರಿತು. ವಿದ್ಯಾರ್ಥಿನಿ ವೈಷ್ಣವಿ ರೈ ಸ್ವಾತಂತ್ರ್ಯೋತ್ಸವದ ಕುರಿತು ಕಿರು ಭಾಷಣ ಮಾಡಿದರು.ಶಿಕ್ಷಕಿ ವಿಲ್ಮಾ ಫರ್ನಾಂಡೀಸ್ ನೇತೃತ್ವದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಶಿಕ್ಷಕಿಯರಾದ ಮಮತಾ, ವೀಕಲಾ ಹಾಗೂ ಎಲಿಜ್ ಅಂದ್ರಾದೆ ಸಹಕರಿಸಿದರು. 7ನೇ ತರಗತಿ ವಿದ್ಯಾರ್ಥಿ ಭಾರವಿ ಕೆ ಭಟ್ ಸ್ವಾಗತಿಸಿ, ವಿದ್ಯಾರ್ಥಿನಿ ಸಾರಾನಝ ವಂದಿಸಿದರು. ವಿದ್ಯಾರ್ಥಿನಿ ಫಾತಿಮತ್ ಸನಾ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here