ಕುರಿಯ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕುರಿಯ ಸ.ಉ.ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಶಾಲೆಯಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ಜಬ್ಬಾರ್ ಎಂ ಎಸ್ ಧ್ವಜಾರೋಹಣ ಮಾಡಿದರು. ಶಾಲಾ ಎಸ್ ಡಿ ಎಂ ಸಿ ಯ ನಾಮ ನಿರ್ದೇಶಿತ ಸದಸ್ಯರು ಹಾಗೂ ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ಬೂಡಿಯಾ ಪುರುಷೋತ್ತಮ ರೈ, ಗ್ರಾಮ ಪಂಚಾಯತ್ ಸದಸ್ಯ ಯಾಕುಬ್, ಎಸ್ ಡಿ ಎಂ ಸಿ ಸದಸ್ಯರು, ಹಿರಿಯ ವಿದ್ಯಾರ್ಥಿಗಳು, ಪೋಷಕರು ಶಾಲಾ ಅಧ್ಯಾಪಕ ವೃಂದ, ವಿದ್ಯಾರ್ಥಿಗಳು ಪಾಲ್ಗೊಂಡರು. ನಂತರ ಶಾಲಾ ವಿದ್ಯಾರ್ಥಿಗಳು ಸೇವಾದಳ, ಬ್ಯಾಂಡ್ ದಳ, ಅಧ್ಯಾಪಕ ವೃಂದ, ಎಸ್ ಡಿ ಎಂ ಸಿ ಅಧ್ಯಕ್ಷರು, ಸದಸ್ಯರು, ಅಗಳು ಹಿರಿಯ ವಿದ್ಯಾರ್ಥಿಗಳು, ಪೋಷಕರು ಉಪಸ್ಥಿತರಿದ್ದರು.


ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್ಡಿ ಎಂ ಸಿ ಅಧ್ಯಕ್ಷ ಅಬ್ದುಲ್ ಜಬ್ಬಾರ್ ವಹಿಸಿದ್ದರು. ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯತ್ ಸದಸ್ಯರೂ ಹಾಗೂ ಎಸ್ಡಿ ಎಂ ಸಿ ನಾಮನಿರ್ದೇಶಿತ ಸದಸ್ಯರೂ ಆಗಿರುವ ಬೂಡಿಯಾರು ಪುರುಷೋತ್ತಮ ರೈ, ಗ್ರಾಮ ಪಂಚಾಯತ್ ಸದಸ್ಯ ಯಾಕುಬ್, ನಾಗೇಶ್, ಕಲಾವತಿ, ಹಿರಿಯರಾದ ವೆಂಕಟರಮಣ ನಕ್ಷತ್ರಾಯರು ಉಪಸ್ಥಿತರಿದ್ದರು.

ಶಾಲಾ ಪ್ರಭಾರ ಮುಖ್ಯೋಪಾಧ್ಯಾಯ ನವೀನ್ ಕುಮಾರ್ ಕೆ ಸ್ವಾಗತಿಸಿ, ಪ್ರಸ್ತಾವನೆಗೈದರು. ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕಿ ದಿವ್ಯಜೋತಿ ಕೆ ಕಾರ್ಯಕ್ರಮ ನಿರೂಪಿಸಿ, ಅತಿಥಿ ಶಿಕ್ಷಕಿ ಮಂಜುಶ್ರೀ ಎ ಧನ್ಯವಾದ ವಿತ್ತರು. ಅತಿಥಿ ಶಿಕ್ಷಕಿ ರಮ್ಯ ಎ ಸ್ವಾತಂತ್ರ್ಯ ದಿನಾಚರಣೆಯ ಮಹತ್ವದ ಬಗ್ಗೆ ತಿಳಿಸಿದರು. ಜ್ಞಾನದೀಪ ಶಿಕ್ಷಕಿ ಮಮತಾ ಎಸ್. ವಿ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here