ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು: ಮೇನಾಲ ಮಧುರಾ ಇಂಟರ್ ನ್ಯಾಷನಲ್ ಸ್ಕೂಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಸಂಸ್ಥೆಯ ನಿರ್ದೇಶಕರಾದ ಬಾತಿಶಾ ಕನಕಮಜಲು ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನಾಚರಣೆಯ ಸಂದೇಶ ನೀಡಿದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ಆಕರ್ಷಕ ಪಥಸಂಚಲನ ನಡೆಯಿತು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಭಾಷಣ, ದೇಶ ಭಕ್ತಿಗೀತೆ ಹಾಗೂ ನೃತ್ಯಗಳನ್ನು ಮಾಡಿದರು. ಸಂಸ್ಥೆಯ ನಿರ್ದೇಶಕ ಹಾಶಿಂ ಮೇನಾಲ, ಸಲಹಾ ಸಮಿತಿ ಸದಸ್ಯರಾದ ಅಬ್ದುಲ್ ರಹಿಮಾನ್ ಹಾಜಿ ಹಾಗೂ ಮುಖ್ಯ ಶಿಕ್ಷಕಿ ತಪಸ್ವಿನಿ ಆರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಸಂಸ್ಥೆಯ ಶಿಕ್ಷಕಿಯರಾದ ಲವೀನಾ ಕ್ರಸ್ತ ಸ್ವಾಗತಿಸಿ, ಅಕ್ಷತಾ ವಂದಿಸಿದರು. ಶಿಕ್ಷಕಿ ಮನೋದ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here