ಕೊಪ್ಪ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಕಾಣಿಯೂರು: ಕೊಪ್ಪ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಶಾಲಾ ಎಸ್. ಡಿ. ಎಮ್. ಸಿ ಅಧ್ಯಕ್ಷರಾದ ಸೀತಾರಾಮ ಕೊಪ್ಪರವರು ಧ್ವಜಾರೋಹಣ ಮಾಡಿದರು. ಶಾಲಾ ಮುಖ್ಯಗುರು ನಾರಾಯಣ್ ಸ್ವಾಗತಿಸಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ ಸಿಂಡಿಕೇಟ್ ಸದಸ್ಯರಾದ ವಿಜಯ ಕುಮಾರ್ ಸೊರಕೆ ಕಾರ್ಯಕ್ರಮಕ್ಕೆ ಶುಭಾಶಯಗಳನ್ನು ಕೋರಿದರು. ಪ್ರಗತಿಪರ ಕೃಷಿಕರಾದ ಪ್ರವೀಣ್ ಕುಂಟ್ಯಾನ ಸಂದರ್ಬೋಚಿತವಾಗಿ ಮಾತನಾಡಿದರು.ಕಾಣಿಯೂರು ಗ್ರಾಮ ಪಂಚಾಯತ್ ಸದಸ್ಯ ವಿಶ್ವನಾಥ ಕೊಪ್ಪ, ವಸಂತ ಕುಂಬಾರ ಕೊಪ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿ ಸಮೃದ್ ಪ್ರಾರ್ಥನೆ ಮಾಡಿ ಗೌರವ ಶಿಕ್ಷಕಿ ಕ್ಷಮಾ ರವರು ವಂದಿಸಿದರು. ಅತಿಥಿ ಶಿಕ್ಷಕ ಸುರೇಶ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here