ಸಾಲ್ಮರ ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಮೌಂಟನ್ ವ್ಯೂ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ ಪಡೀಲ್‌ರವರು ಧ್ವಜಾರೋಹಣಗೈದು ಶುಭಹಾರೈಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ನೂರುದ್ದೀನ್ ಸಾಲ್ಮರ, ಸಂಸ್ಥೆಯ ಕಾರ್ಯದರ್ಶಿ ಹಾಜಿ ಅಬ್ದುಲ್ ರಹಿಮಾನ್ ಅಝಾದ್ ದರ್ಬೆ, ಉಪಾಧ್ಯಕ್ಷ ಯೂಸುಫ್ ಹಾಜಿ, ಟ್ರಸ್ಟಿಗಳಾದ ಯು.ಅಬ್ದುಲ್ಲಾ ಹಾಜಿ, ಎಲ್.ಟಿ.ಅಬ್ದುರ್ರಝಾಕ್ ಹಾಜಿ, ಅಸ್ವಾಲಿಹಾ ವುಮೆನ್ಸ್ ಶರೀಅತ್, ಪಿ.ಯು.ಕಾಲೇಜ್‌ನ ಉಸ್ತಾದ್ ಕೆ.ಎಂ.ಎ. ಕೊಡುಂಗಾಯಿ ಫಾಝಿಲ್ ಹನೀಫಿ, ಸಾಲ್ಮರ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಮೋಹನಾಂಗಿ, ರಕ್ಷಕ – ಶಿಕ್ಷಕ ಸಂಘದ ಅಧ್ಯಕ್ಷ ಉಸ್ಮಾನ್ ಮೊದಲಾದವರು ಉಪಸ್ಥಿತರಿದ್ದರು. ಸಮಾಜ ಸೇವಕ ಕರೀಂ ವಿಟ್ಲ ರವರು ಡ್ರೀಮ್ ಲೈಫ್ ಹೆಲ್ಫ್ ಕೇರ್ ವತಿಯಿಂದ ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಯ ಸಾಧಕ ವಿದ್ಯಾರ್ಥಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ನಡೆಸಿದ ಸಾಂಸ್ಕೃತಿಕ ಸ್ಪರ್ಧೆ ವಿಜೇತರಿಗೆ ಬಹುಮಾನವನ್ನು ಈ ಸಂದರ್ಭದಲ್ಲಿ ವಿತರಿಸಲಾಯಿತು. ಸಂಸ್ಥೆಯ ಎಲ್ಲಾ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕ ರವೂಫ್ ಸ್ವಾಗತಿಸಿದರು. ಶಿಕ್ಷಕ ಮಂಜುನಾಥ ರೈ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು. ದೈಹಿಕ ಶಿಕ್ಷಕರಾದ ಅಶ್ರಫ್ ಮತ್ತು ಜಯರಾಮ್ ಮತ್ತು ಕಾರ್ಯಾಲಯ ನಿರ್ವಾಹಕರಾದ ಯೂಸುಫ್ ಕೂಟತ್ತಾನ ಮತ್ತು ಹಮೀದ್ ಸಹಕರಿಸಿದರು.

LEAVE A REPLY

Please enter your comment!
Please enter your name here