ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುತ್ತೂರು : ಕಾವು ಬುಶ್ರಾ ವಿದ್ಯಾಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಸಂಸ್ಥೆಯ ಅಧ್ಯಕ್ಷ ಬುಶ್ರಾ ಅಬ್ದುಲ್ ಅಝೀಝ್ ರವರು ಧ್ವಜಾರೋಹಣ ನೆರವೇರಿಸಿದರು. ಬಳಿಕ ಶಾಲೆಯಿಂದ ಕಾವು ಜಂಕ್ಷನ್ ವರೆಗೆ ಅತ್ಯಾಕರ್ಷಕ ಪಥಸಂಚಲನ ನಡೆಯಿತು. ಬಳಿಕ ಸಂಸ್ಥೆಯ ಅಧ್ಯಕ್ಷ ಅಬ್ದುಲ್ ಅಝೀಝ್ ರವರ ಅಧ್ಯಕ್ಷತೆ ಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ನಿವೃತ್ತ ಯೋಧ ದೇರ್ಲ ಅಮ್ಮಣ್ಣ ರೈ, ನನ್ಯ ಶಾಲೆಯ ಸಹಾಯಕ ಶಿಕ್ಷಕಿ ಮಾಬ್ಲೆ ಡಿಸೋಜ , ಸಂಸ್ಥೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಹೀರಾ ಅಬ್ದುಲ್ ಖಾದರ್ ಹಾಜಿ , ಸಂಸ್ಥೆಯ ಆಡಳಿತ ಸಮಿತಿಯ ಶಾಫಿ , ಸಂಸ್ಥೆಯ ಮುಖ್ಯ ಶಿಕ್ಷಕಿ ದೀಪಿಕ , ಮಹಮ್ಮದ್ ಪಿ ಕೆ., ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷ ಐ ಸಿ ಕೈಲಾಸ್ , ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಕೃಷ್ಣ ಪ್ರಸಾದ್ , ಸುರೇಶ್ ಆಳ್ವ , ಪ್ರದೀಪ್ ಮೇನಾಲ ಮೊದಲಾದವರು ಉಪಸ್ಥಿತರಿದ್ದರು.

ನಿವೃತ್ತ ಯೋಧ ದೇರ್ಲ ಅಮ್ಮಣ್ಣ ರೈ ಯವರನ್ನು ಸಂಸ್ಥೆಯ ವತಿಯಿಂದ ಸಮ್ಮಾನಿಸಲಾಯಿತು . ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸ್ವಾತಂತ್ರ್ಯೋತ್ಸವ ಸಂಭ್ರಮದಲ್ಲಿ ಶಿಕ್ಷಕ – ರಕ್ಷಕ ಸಂಘದ ಪದಾಧಿಕಾರಿಗಳು , ಹೆತ್ತವರು , ಬೋಧಕ ಹಾಗೂ ಬೋಧಕೇತರ ವೃಂದ , ವಿದ್ಯಾರ್ಥಿ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here