ಪುತ್ತೂರು: ಮರೀಲ್ ಇಎಸ್‌ಆರ್ ಪ್ರೆಸಿಡೆನ್ಸಿ ವಿದ್ಯಾಸಂಸ್ಥೆಯಲ್ಲಿ 77ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಅತಿಥಿಯಾಗಿ ಆಗಮಿಸಿದ್ದ ಪುತ್ತೂರು ಕಮ್ಯೂನಿಟಿ ಸೆಂಟರ್‌ನ ಚೇರ್‌ಮೆನ್ ಅಮ್ಜದ್ ಖಾನ್ ಧ್ವಜಾರೋಹಣಗೈದು ಸ್ವಾತಂತ್ರ್ಯೋತ್ಸವದ ಮಹತ್ವದ ಕುರಿತು ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಶಾಲಾ ಸಂಚಾಲಕ ಝಾಕಿರ್ ಹುಸೇನ್ ಮಾತನಾಡಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವನನ್ನು ನೆನಪು ಮಾಡುವುದು ನಮ್ಮೆಲ್ಲರ ಬಾಧ್ಯತೆಯಾಗಿದೆ ಎಂದು ಹೇಳಿ ಶುಭ ಹಾರೈಸಿದರು.
ಸಂಸ್ಥೆಯ ರಕ್ಷಕ ಶಿಕ್ಷಕ ಸಮಿತಿಯ ನೂತನ ಅಧ್ಯಕ್ಷ ಸಿರಾಜ್ ಎ.ಕೆ, ಉಪಾಧ್ಯಕ್ಷೆ ಶಾಹಿದ, ಸದಸ್ಯರಾದ ಸಿರಾಜ್ ಹಾಗೂ ಅಬ್ದುಲ್ ಹಮೀದ್, ವಿದ್ಯಾ ಕೀರ್ತಿ ಎಜುಕೇಶನಲ್ ಅಂಡ್ ಚ್ಯಾರಿಟೇಬಲ್ ಟ್ರಸ್ಟ್ನ ಸದಸ್ಯರಾದ ವಿ.ಕೆ ಸಲೀಂ, ವಿ.ಕೆ ಶರೀಫ್ ಹಾಗೂ ಅಬ್ದುಲ್ ಮಕ್ಸುದ್ ಉಪಸ್ಥಿತರಿದ್ದರು. ಕಾರ್ಯಕ್ರಮದ ನಂತರ ಶಾಲಾ ವಿದ್ಯಾರ್ಥಿಗಳಿಂದ ದೇಶಭಕ್ತಿ ಗೀತೆ, ಭಾಷಣ ಹಾಗೂ ಮನೋರಂಜನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು. ಮುಖ್ಯ ಶಿಕ್ಷಕಿ ತಾಜುನ್ನಿಸಾ ಸ್ವಾಗತಿಸಿದರು. ನವ್ಯಶ್ರೀ ವಂದಿಸಿದರು. ಶಿಕ್ಷಕಿ ಸಯೀದಾ ಕಾರ್ಯಕ್ರಮ ನಿರೂಪಿಸಿದರು. ರಕ್ಷಕ ಶಿಕ್ಷಕ ಸಮಿತಿಯ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮಕ್ಕಳಿಗೆ ಸಿಹಿ ತಿಂಡಿ ವಿತರಿಸಿದರು.