ತೋರಣಕಟ್ಟೆ ಸ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಪುಣಚ : ಪುಣಚ ತೋರಣಕಟ್ಟೆ ಸ.ಕಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಸ್ವಾತಂತ್ರ್ಯೋತ್ಸವನ್ನು ಶಾಲಾ ಎಸ್ .ಡಿ.ಎಂ.ಸಿ ಅಧ್ಯಕ್ಷ ರವಿ ರವರು ಧ್ವಜಾರೋಹಣ ನೆರವೇರಿಸಿ ಶುಭ ಹಾರೈಸಿದರು. ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಲೀಲಾವತಿ ಯವರು ಸ್ವಾತಂತ್ರ್ಯೋತ್ಸವದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.


ಪುಣಚ ಗ್ರಾ.ಪಂ .ಮಾಜಿ ಅಧ್ಯಕ್ಷ ರಾಮಕೃಷ್ಣ ಬಿ, ಗ್ರಾ. ಪಂ ಉಪಾಧ್ಯಕ್ಷ ಮಹೇಶ್ ಶೆಟ್ಟಿ ಬೈಲುಗುತ್ತು ಮಕ್ಕಳಿಗೆ ಬಹುಮಾನ ವಿತರಿಸಿ ಶುಭ ಹಾರೈಸಿದರು. ವಿದ್ಯಾಭಿಮಾನಿ ಸಂಘದ ಅಧ್ಯಕ್ಷರು, ಅಂಗನವಾಡಿ ಕಾರ್ಯಕರ್ತೆಯರು, ಪ್ರಾ. ಆರೋಗ್ಯ ಕೇಂದ್ರ ಸಹಾಯಕಿ, ಆಶಾ ಕಾರ್ಯಕರ್ತೆಯರು ಶಾಲಾ ಸಿಬ್ಬಂದಿವರ್ಗ ಉಪಸ್ಥಿತರಿದ್ದರು. ಶಾಲಾ ಶಿಕ್ಷಕಿ ಲಕ್ಷ್ಮೀ ಪ್ರಭಾ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here