ಉಪ್ಪಿನಂಗಡಿ : ಎಂಡಿಎಂಎ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಉಪ್ಪಿನಂಗಡಿ ಗ್ರಾಮದ ಕೂಟೇಲು ಎಂಬಲ್ಲಿ ನಡೆದಿದೆ.
ಬಜತ್ತೂರು ನಿವಾಸಿ ಲತೀಫ್ ಬಿ.ಎ (35) , ಬೆಳ್ತಂಗಡಿ ಕೊಕ್ಕಡ ನಿವಾಸಿ ಬಿ ಜುನೈದ್ (30) ಬಂಧಿತರು. ಆ.15 ರಂದು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಕೂಟೇಲು ಎಂಬಲ್ಲಿ ಉಪ್ಪಿನಂಗಡಿ ಠಾಣಾ ಪೊಲೀಸರು ವಾಹನ ತಪಾಸಣೆ ಮಾಡಿಕೊಂಡಿರುವಾಗ ಅದೇ ಮಾರ್ಗವಾಗಿ ಬಂದ ಸ್ಕಾರ್ಫಿಯೋ ವಾಹನವನ್ನು ನಿಲ್ಲಿಸಲು ಸೂಚಿಸಿದ್ದು, ಈ ವೇಳೆ ವಾಹನವನ್ನು ನಿಲ್ಲಿಸಿ ವಾಹನದಲ್ಲಿದ್ದ ಇಬ್ಬರು ಪರಾರಿಯಾಗಲು ಯತ್ನಿಸಿದ್ದು, ಸ್ಥಳದಲ್ಲಿದ್ದ ಪೊಲೀಸರು ಅವರನ್ನು ಹಿಡಿದು ವಿಚಾರಿಸಿದ್ದು, ಈ ವೇಳೆ ಸದರಿ ವಾಹನವನ್ನು ಪರಿಶೀಲಿಸಲಾಗಿ ಅಂದಾಜು 6,000/- ಮೌಲ್ಯದ 3.2 ಮಿಲಿ ಗ್ರಾಂ ಮಾದಕ ವಸ್ತು ಎಂಡಿಎಂಎ ದೊರಕಿರುತ್ತದೆ.
ಇಬ್ಬರು ಆರೋಪಿಗಳು, ಮಾದಕ ವಸ್ತು ಎಂಡಿಎಂಎ ಹಾಗೂ ಆರೋಪಿಗಳ ಬಳಿಯಿದ್ದ 2 ಮೊಬೈಲ್ ಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನವನ್ನು ವಶಕ್ಕೆ ಪಡೆದು ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.