ಕೆಯ್ಯೂರು ಗ್ರಾಪಂ-ಅಧ್ಯಕ್ಷರಾಗಿ ಶರತ್ ಕುಮಾರ್ ಮಾಡಾವು, ಉಪಾಧ್ಯಕ್ಷರಾಗಿ ಸುಮಿತ್ರ ಪಲ್ಲತ್ತಡ್ಕ ಅವಿರೋಧ ಆಯ್ಕೆ

0

ಪುತ್ತೂರು: ಕೆಯ್ಯೂರು ಗ್ರಾಮ ಪಂಚಾಯತ್‌ನ ಎರಡನೇ ಅವಧಿಗೆ ಅಧ್ಯಕ್ಷರಾಗಿ ಶರತ್ ಕುಮಾರ್ ಮಾಡಾವು ಹಾಗೂ ಉಪಾಧ್ಯಕ್ಷರಾಗಿ ಸುಮಿತ್ರ ಪಲ್ಲತ್ತಡ್ಕರವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಗ್ರಾಪಂ ಒಟ್ಟು 15 ಸದಸ್ಯ ಬಲ ಹೊಂದಿದ್ದು ಇದರಲ್ಲಿ 9 ಮಂದಿ ಬಿಜೆಪಿ ಬೆಂಬಲಿತ, 5 ಕಾಂಗ್ರೆಸ್ ಹಾಗೂ ಓರ್ವ ಎಸ್‌ಡಿಪಿಐ ಬೆಂಬಲಿತ ಸದಸ್ಯರನ್ನು ಒಳಗೊಂಡಿದೆ. ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಪುರುಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಎ ಮಹಿಳೆ ಮೀಸಲಾತಿ ಪ್ರಕಟಗೊಂಡಿತ್ತು. ಅದರಂತೆ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಶರತ್ ಕುಮಾರ್ ಮಾಡಾವು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸುಮಿತ್ರ ಪಲ್ಲತ್ತಡ್ಕ ನಾಮಪತ್ರ ಸಲ್ಲಿಸಿದ್ದರು. ಇತರ ಯಾವುದೇ ನಾಮಪತ್ರ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಚುನಾವಣಾ ಅಧಿಕಾರಿ ತೋಟಗಾರಿಕಾ ಇಲಾಖಾ ಸಹಾಯಕ ನಿರ್ದೇಶಕಿ ರೇಖಾರವರು ಅಧ್ಯಕ್ಷರಾಗಿ ಶರತ್ ಕುಮಾರ್ ಮಾಡಾವು ಹಾಗೂ ಉಪಾಧ್ಯಕ್ಷರಾಗಿ ಸುಮಿತ್ರ ಪಲ್ಲತ್ತಡ್ಕರವರ ಹೆಸರು ಘೋಷಣೆ ಮಾಡಿದರು. ಗ್ರಾಪಂ ಕಾರ್ಯದರ್ಶಿ ಸುರೇಂದ್ರ ರೈ ಇಳಂತಾಜೆ ಸಹಕರಿಸಿದ್ದರು.


ಈ ಸಂದರ್ಭದಲ್ಲಿ ಗ್ರಾಪಂ ನಿಕಟಪೂರ್ವ ಅಧ್ಯಕ್ಷೆ ಜಯಂತಿ ಎಸ್.ಭಂಡಾರಿ, ಉಪಾಧ್ಯಕ್ಷೆ ಗಿರಿಜಾ ಕಣಿಯಾರು, ಸದಸ್ಯರುಗಳಾದ ಅಬ್ದುಲ್ ಖಾದರ್ ಮೇರ್ಲ, ಜಯಂತ ಪೂಜಾರಿ ಕೆಂಗುಡೇಲು, ಬಟ್ಯಪ್ಪ ರೈ ದೇರ್ಲ, ಶೇಷಪ್ಪ ದೇರ್ಲ, ವಿಜಯ ಕುಮಾರ್ ಸಣಂಗಳ, ತಾರಾನಾಥ ಕಂಪ, ಅಮಿತಾ ಎಚ್.ರೈ, ಮಮತಾ ರೈ, ಮೀನಾಕ್ಷಿ ವಿ.ರೈ, ಸುಭಾಷಿಣಿ,ಅಭಿವೃದ್ದಿ ಅಧಿಕಾರಿ ನಮಿತಾ ಕೆ, ಗ್ರಾಪಂ ಸಿಬ್ಬಂದಿಗಳಾದ ಶಿವಪ್ರಸಾದ್, ರಾಕೇಶ್, ಮಾಲತಿ, ಜ್ಯೋತಿ, ಧರ್ಮಣ್ಣ ಸಹಕರಿಸಿದ್ದರು. ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಮಂದಿ ಭೇಟಿ ನೀಡಿ ನೂತನವಾಗಿ ಆಯ್ಕೆಯಾದ ಅಧ್ಯಕ್ಷ, ಉಪಾಧ್ಯಕ್ಷರಾಗಿ ಹೂ ಹಾರ ಹಾಕಿ ಅಭಿನಂದಿಸಿದರು.

LEAVE A REPLY

Please enter your comment!
Please enter your name here