![](https://puttur.suddinews.com/wp-content/uploads/2024/06/Imperial_Manjunatheshwara_-GL-Acharya.gif)
ಕಾಣಿಯೂರು: ಕಾಣಿಯೂರು ಗ್ರಾ.ಪಂ ವ್ಯಾಪ್ತಿಯ ಕಾಣಿಯೂರು, ಚಾರ್ವಾಕ, ದೋಳ್ಪಾಡಿ ಗ್ರಾಮಗಳ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಆ.17ರಂದು ಕಾಣಿಯೂರು ಗ್ರಾ.ಪಂ.ಸಭಾಭವನದಲ್ಲಿ ಗ್ರಾ.ಪಂ ಅಧ್ಯಕ್ಷೆ ಲಲಿತಾ ದರ್ಖಾಸು ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪುತ್ತೂರು ತಾಲೂಕು ಪಂಚಾಯತ್ ಯೋಜನಾಧಿಕಾರಿ ಸುಕನ್ಯಾ ಮಾರ್ಗದರ್ಶಿ ಅಧಿಕಾರಿಯಾಗಿ ಭಾಗವಹಿಸಲಿದ್ದು, ಗ್ರಾಮ ಪಂಚಾಯತ್ ಕ್ಷೇತ್ರಕ್ಕೆ ಒಳಪಟ್ಟ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮಸಭೆಯಲ್ಲಿ ಭಾಗವಹಿಸಿ, ಗ್ರಾಮೀಣ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಸೂಕ್ತ ಸಲಹೆ- ಸೂಚನೆಗಳನ್ನು ನೀಡುವಂತೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ದೇವರಾಜ್ ತಿಳಿಸಿದ್ದಾರೆ.