





ಸವಣೂರು : ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪುಣ್ಚಪ್ಪಾಡಿಯಲ್ಲಿ ಆ.9ರಂದು ತೆಂಗಿನ ಮರದಿಂದ ಕಾಯಿ ಕೀಳಲು ಮರ ಹತ್ತುವಾಗ ಆಕಸ್ಮಿಕವಾಗಿ ಮೃತಪಟ್ಟ ಪುಣ್ಚಪ್ಪಾಡಿ ಗ್ರಾಮದ ಬೊಳ್ಳಾಜರ ಸುಚಿತ್ರಾ ಅವರ ಮನೆಗೆ ಶಾಸಕಿ ಭಾಗೀರಥಿ ಮುರುಳ್ಯ ಭೇಟಿ ನೀಡಿ ದಿ.ಸುಚಿತ್ರಾ ಅವರ ಪತಿ ಪ್ರಮೋದ್ ಬೊಳ್ಳಾಜೆ ಹಾಗೂ ಮಕ್ಕಳಿಗೆ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.


ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ, ಕಡಬ ತಾ.ಪಂ.ಮಾಜಿ ಅಧ್ಯಕ್ಷೆ ರಾಜೇಶ್ವರಿ ಕನ್ಯಾಮಂಗಲ,ಕಾಣಿಯೂರು ಗ್ರಾ.ಪಂ.ಉಪಾಧ್ಯಕ್ಷ ಗಣೇಶ್ ಉದನಡ್ಕ,ಸವಣೂರು ಗ್ರಾ.ಪಂ.ಮಾಜಿ ಅಧ್ಯಕ್ಷೆ ಇಂದಿರಾ ಬಿ. ಕೆ., ಸವಣೂರು ಗ್ರಾ.ಪಂ.ಉಪಾಧ್ಯಕ್ಷ ಶೀನಪ್ಪ ಶೆಟ್ಟಿ ನೆಕ್ರಾಜೆ, ಕಾಣಿಯೂರು-ಸವಣೂರು ರೈತ ಉತ್ಪಾದಕ ಸಂಸ್ಥೆಯ ಅಧ್ಯಕ್ಷ ಗಿರಿಶಂಕರ ಸುಲಾಯ ,ಆಶಾ ರೈ ಕಲಾಯಿ ಮೊದಲಾದವರು ಉಪಸ್ಥಿತರಿದ್ದರು.












