ಮರ್ದಾಳ ಗುಡ್ ಶೆಫರ್ಡ್ ಹೈಸ್ಕೂಲ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ಮರ್ದಾಳ: 77ನೇಯ ಸ್ವಾತಂತ್ರ್ಯ ದಿನಾಚರಣೆಯನ್ನು ಮರ್ದಾಳ ಗುಡ್ ಶೆಫರ್ಡ್ ಹೈಸ್ಕೂಲಿನಲ್ಲಿ ಆಚರಿಸಲಾಯಿತು.
ನಿವೃತ್ತ ಯೋಧ ಗೋಪಾಲ ಗೌಡ ಬಿಳಿನೆಲೆ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಇಂದಿನ ಮಕ್ಕಳಲ್ಲಿ ಎಳವೆಯಿಂದಲೇ ದೇಶ ಪ್ರೇಮವನ್ನು ಗುರುಗಳು ಮೂಡಿಸಬೇಕು ಹಾಗೂ ಮಕ್ಕಳು ಆದಷ್ಟು ಮೊಬೈಲಿನಿಂದ ದೂರವಿರಬೇಕು ಎಂದು ಕಿವಿ ಮಾತನ್ನು ಹೇಳಿದರು. ಶಾಲಾ ಶೈಕ್ಷಣಿಕ ಸಲಹೆಗಾರರಾದ ಮೇಫಿ ಚೆರಿಯನ್‌ರವರು ಸ್ವಾತಂತ್ರ್ಯ ದಿನಾಚರಣೆಯ ಬಗ್ಗೆ ಮಾತನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಪ್ರಿಯಾ ಕಿಶೋರ್‌ರವರು ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯ ದಿನಾಚರಣೆಯ ಸಂದೇಶವನ್ನು ನೀಡಿದರು. ಶಾಲಾ ಸಂಚಾಲಕ ತೋಮಸ್, ಶಾಲಾ ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷ ಸುಲೈಮಾನ್, ಭವ್ಯ ಬಾಲಕೃಷ್ಣ ಗೌಡ ವಾಲ್ತಾಜೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶಾಲಾ ವಿದ್ಯಾರ್ಥಿಗಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿದರು. ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನವನ್ನು ವಿತರಿಸಲಾಯಿತು. ಮಾಸ್ಟರ್ ನಿಖಿಲ್ ಸ್ವಾಗತಿಸಿ, ನೆಫಿಶತುಲ್ ಶೈಮಾ ವಂದಿಸಿದರು. ಮಾಸ್ಟರ್ ಕಮಲೇಶ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here