ವಿಟ್ಲ : ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಅಳಿಕೆ ಗ್ರಾಮದ ಮುಳಿಯ ಎಂಬಲ್ಲಿ ನಡೆದಿದೆ.
ಮಂಜೇಶ್ವರ ಬಾಕ್ರಬೈಲು ನಿವಾಸಿ ಇಬ್ರಾಹಿಂ (ಮೋನು), ಮಂಜೇಶ್ವರ ಬಾಕ್ರಬೈಲು ನಿವಾಸಿ ಮೂಸಾ, ವಿಟ್ಲ ಕನ್ಯಾನ ನಿವಾಸಿ ಹಮೀದ್ (ಜಲಾಲ್), ಸಾಲೆತ್ತೂರಿನ ಹಮೀದ್ ಎಂಬವರನ್ನು ವಶಕ್ಕೆ ಪಡೆದಿದ್ದು, 5 ಜಾನುವಾರುಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.