ನೂಜಿಬಾಳ್ತಿಲ ಗ್ರಾಮ ಪಂಚಾಯತ್-ಅಧ್ಯಕ್ಷರಾಗಿ ಚಂದ್ರಾವತಿ ಜಾಲು, ಉಪಾಧ್ಯಕ್ಷರಾಗಿ ಚಂದ್ರಶೇಖರ್ ಹಳೇನೂಜಿ ಆಯ್ಕೆ

0

ಕಡಬ: ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ ಸ್ಥಾನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯರ ಅವಿರೋಧ ಆಯ್ಕೆ ನಡೆದಿದೆ.

13 ಸದಸ್ಯ ಬಲ ಹೊಂದಿರುವ ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ಪೈಕಿ ಮೂರು ಸದಸ್ಯ ಸ್ಥಾನ ಕಾಂಗ್ರೆಸ್ ಪಾಲಿಗಿದ್ದು, 10 ಬಿಜೆಪಿ ಬೆಂಬಲಿತ ಸದಸ್ಯರಿದ್ದ ಕಾರಣ ಬಿಜೆಪಿ ಬೆಂಬಲಿತ ಅಭ್ಯರ್ಥಿಯೇ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ನೂಜಿಬಾಳ್ತಿಲ ಗ್ರಾಮ ಪಂಚಾಯತ್ ನ ವಾರ್ಡ್ 3 ರ ಸದಸ್ಯೆ ಚಂದ್ರಾವತಿ ಜಾಲು ಅವರು ಪ್ರವರ್ಗ ಎ ಮೀಸಲಾತಿಯಡಿ ಅಧ್ಯಕ್ಷರಾಗಿ ಆಯ್ಕೆಯಾದರೆ, ಉಪಾಧ್ಯಕ್ಷರಾಗಿ ವಾರ್ಡ್ 2 ರ ಸದಸ್ಯ ಚಂದ್ರಶೇಖರ್ ಹಳೇನೂಜಿ ಅವರು ಸಾಮಾನ್ಯ ಮೀಸಲಾತಿ ಆಧಾರದಲ್ಲಿ ಆಯ್ಕೆಯಾಗಿದ್ದಾರೆ.

ಚುನಾವಣಾ ಪ್ರಕ್ರಿಯೆಯ‌ ಉಸ್ತುವಾರಿಯಾಗಿ ಕುಕ್ಕೆ ಶ್ರೀ ಸುಬ್ರಮಣ್ಯೇಶ್ವರ ಕಾಲೇಜಿನ ಉಪನ್ಯಾಸಕ ಡಾ ಪ್ರಸಾದ್ ನಡುವಾಳು ಉಸ್ತುವಾರಿಯಡಿ ಚುನಾವಣೆ ಪ್ರಕ್ರಿಯೆ ನಡೆಯಿತು. ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗುರುವ, ಮಾಜಿ ಅಧ್ಯಕ್ಷೆ ಗಂಗಮ್ಮ, ಮಾಜಿ ಉಪಾಧ್ಯಕ್ಷ ಇಮ್ಯಾನುವೆಲ್ ಪಿ. ಜೆ ಹಾಗೂ ಇತರ ಗ್ರಾಮ ಪಂಚಾಯತ್ ಸದಸ್ಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here