ಐತ್ತೂರು ಗ್ರಾ.ಪಂ: ರಾಜಕೀಯ ಮೇಲಾಟದಲ್ಲಿ ಬಿಜೆಪಿಗೆ ಮುಖಭಂಗ

0

ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ
ಬಿಜೆಪಿ ಬೆಂಬಲಿತ ಸದಸ್ಯೆ ಕಾಂಗ್ರೆಸ್ ಬೆಂಬಲದಿಂದ ಉಪಾಧ್ಯಕ್ಷೆಯಾಗಿ ಆಯ್ಕೆ
ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ವತ್ಸಲಾ ಅವಿರೋಧ ಆಯ್ಕೆ

ಕಡಬ: ಪಂಚಾಯತ್ ಮಟ್ಟದಲ್ಲಿಯೇ ರಾಜಕೀಯ ಬೆಳವಣಿಗೆಗೆ ಸಾಕ್ಷಿಯಾಗಿದ್ದ ಐತ್ತೂರು ಗ್ರಾಮ ಪಂಚಾಯತ್ ನಲ್ಲಿ ಈ ಭಾರಿಯೂ ಅಧ್ಯಕ್ಷ ,ಉಪಾಧ್ಯಕ್ಷ ಆಯ್ಕೆಯಲ್ಲಿ ರಾಜಕೀಯ ಮೇಲಾಟ ನಡೆದಿದೆ.


ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸದಸ್ಯೆ ವತ್ಸಲಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರೆ. ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆದು ಬಿಜೆಪಿ ಬೆಂಬಲಿತ ಸದಸ್ಯೆಯಾಗಿದ್ದ ಜಯಲಕ್ಷ್ಮೀ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ಉಪಾಧ್ಯಕ್ಷೆಯಾಗಿ ಆಯ್ಕೆಯಾದ ಘಟನೆ ನಡೆದಿದೆ.


ಐತ್ತೂರು ಗ್ರಾ.ಪಂ.ನ ಒಟ್ಟು 11 ಮಂದಿ ಸದಸ್ಯ ಬಲದಲ್ಲಿ 6 ಮಂದಿ ಬಿಜೆಪಿ ಬೆಂಬಲಿತ ಸದಸ್ಯರು, 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು ಇದ್ದಾರೆ. ಈ ಭಾರಿ ಅಧ್ಯಕ್ಷ ಸ್ಥಾನಕ್ಕೆ ವತ್ಸಲಾ ಅವರು ಅವಿರೋಧ ವಾಗಿ ಆಯ್ಕೆಯಾಗಿದ್ದಾರೆ. ಆದರೆ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಧನಲಕ್ಷ್ಮಿ ಯವರು ನಾಮ ಪತ್ರ ಸಲ್ಲಿಸಿದ್ದರು. ಆದರೆ ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದ ಬಿಜೆಪಿ ಬೆಂಬಲಿತ ಸದಸ್ಯೆ ಜಯಲಕ್ಷ್ಮಿ ಅವರು ಕೂಡ ಕಾಂಗ್ರೆಸ್ ಬೆಂಬಲದೊಂದಿಗೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ನಡೆದಾಗ ಧನಲಕ್ಷ್ಮೀ ಅವರು 5 ಹಾಗೂ ಜಯಲಕ್ಷ್ಮಿ ಅವರು 6 ಮತಗಳನ್ನು ಪಡೆದು ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದಾರೆ.


ಪಂಚಾಯತ್ ರಾಜಕೀಯದ ಮೇಲಾಟದಲ್ಲಿ ಸದಾ ಸುದ್ದಿಯಲ್ಲಿರುವ ಐತ್ತೂರು ಗ್ರಾ.ಪಂ. ನಲ್ಲಿ ಬಿಜೆಪಿಗಿಂತ ಕಾಂಗ್ರೆಸ್ ಒಂದು ಸ್ಥಾನ ಕಡಿಮೆ ಇದ್ದರೂ ಬಿಜೆಪಿ ಸದಸ್ಯರನ್ನು ತನ್ನ ಕಡೆಗೆ ಸೆಳೆಯುವುದರ ಮೂಲಕ ಬಿಜೆಪಿಗೆ ಮುಖಭಂಗ ಉಂಟು ಮಾಡುವಲ್ಲಿ ಕಾಂಗ್ರೆಸ್ ಯಶಸ್ವಿಯಾಗಿದೆ.

LEAVE A REPLY

Please enter your comment!
Please enter your name here