ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮ

0

ಪುತ್ತೂರು: ಕ್ರಿಯಾತ್ಮಕವಾಗಿ ಯೋಜನೆಗಳನ್ನು ರೂಪಿಸಿಕೊಂಡು ಅದನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ನಮ್ಮ ಗುರಿಯನ್ನು ಸಾಧಿಸಲು ಸಾಧ್ಯ ಎಂದು ಬೆಳ್ಳಾರೆಯ ಸರಕಾರಿ ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಬಿ. ವಿ ಸೂರ್ಯನಾರಾಯಣ ಹೇಳಿದರು.

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ನಡೆದ ವೃತ್ತಿ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು. ದೃಢತೆಯ ಕಡೆಗೆ ಗುರಿಯನ್ನು ಇಟ್ಟುಕೊಂಡು ನಡೆದಾಗ ನಮ್ಮ ವಿದ್ಯಾಸಂಸ್ಥೆ ನೀಡಿದ ಶಿಕ್ಷಣ ಸಾರ್ಥಕವಾಗುತ್ತದೆ. ಜೊತೆಗೆ ಮಾನವೀಯತೆಯನ್ನು ರೂಢಿಸಿಕೊಂಡು ಬಾಳಿದರೆ ಮಾತ್ರ ಗೌರವ ಸಿಗುತ್ತದೆ. ಗೌರವ ನಮ್ಮನ್ನು ಹುಡುಕಿಕೊಂಡು ಬರುವ ರೀತಿಯಲ್ಲಿ ನಾವು ಬೆಳೆಯಬೇಕು. ಜೀವನದಲ್ಲಿ ಗುರಿ ಸ್ಪಷ್ಟವಿದ್ದು ಸರಿದಾರಿಯಲ್ಲಿ ಹೋದಾಗ ಮಾತ್ರ ಬದುಕಿಗೆ ಒಂದು ಅರ್ಥ ಬರುತ್ತದೆ. ನಾವು ಯಾವ ಕೆಲಸವನ್ನು ಮಾಡಿದರೂ ಅದಕ್ಕೆ ಪ್ರಯತ್ನ ಮುಖ್ಯ. ಆಗ ಮಾತ್ರ ಯಶಸ್ಸು ಲಭಿಸುತ್ತದೆ ಎಂದರು. ನಂತರ ಕಲಿಯುವಿಕೆಯ ವಿವಿಧ ಹಂತಗಳನ್ನು ಪರಿಚಯಿಸಿಕೊಟ್ಟರು.ಪಿಯುಸಿ ನಂತರ ಲಭ್ಯವಿರುವ ವಿವಿಧ ಕೋರ್ಸ್‌ಗಳು ಹಾಗೂ ಸ್ಫರ್ಧಾತ್ಮಕ ಪರೀಕ್ಷೆಗಳ ಮಾಹಿತಿಯನ್ನು ಈ ಸಂದರ್ಭದಲ್ಲಿ ಒದಗಿಸಿಕೊಟ್ಟರು.

ಕಾರ್ಯಕ್ರಮದಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯ ಡಾ. ಕೆ. ಎನ್ ಸುಬ್ರಹ್ಮಣ್ಯ, ಪ್ರಾಂಶುಪಾಲ ಮಹೇಶ ನಿಟಿಲಾಪುರ ಉಪಸ್ಥಿತರಿದ್ದರು. ಕಾರ್ಯಕ್ರಮದ ಸಂಯೋಜಕಿ ದೀಕ್ಷಿತಾ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here