ಮೊಬೈಲ್ ಆ್ಯಪ್ ನಲ್ಲಿ ಮುಂಗಾರು ಹಂಗಾಮಿನ ರೈತರ ಬೆಳೆ ಸಮೀಕ್ಷೆ ಆರಂಭ

0

ಪುತ್ತೂರು: ರೈತರೇ ಸ್ವತಃ ತಮ್ಮ ಮೊಬೈಲ್ ಆ್ಯಪ್ ಉಪಯೋಗಿಸಿ ಸ್ವತಂತ್ರವಾಗಿ ಮುಂಗಾರು ಹಂಗಾಮ ಬೆಳೆ ಸಮೀಕ್ಷೆ ನಡೆಸುವ ಕಾರ್ಯ ಪ್ರಾರಂಭಗೊಂಡಿದೆ.


ಕಳೆದ ಮೂರು ವರ್ಷಗಳ ಹಿಂದೆ ಪ್ರಾರಂಭಗೊಂಡ ಈ ಯೋಜನೆ ಈ ಬಾರಿಯು ಮುಂದುವರಿದಿದೆ. ಕೃಷಿಕರು ತಮ್ಮ ಜಮೀನಿನಲ್ಲಿ ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ ಅಪ್ಲೋಡ್ ಮಾಡುವ ಅವಕಾಶವಿರುತ್ತದೆ. ಬೆಳೆ ವಿವರ ದಾಖಲಿಸಲು ಗೂಗಲ್ ಪ್ಲೇಸ್ಟೋರ್‌ನಲ್ಲಿ `ಮುಂಗಾರು ರೈತರ ಬೆಳೆ ಸಮೀಕ್ಷೆ 2023′ ಮೊಬೈಲ್ ಆಪ್‌ನ್ನು ಡೌನ್‌ಲೋಡ್ ಮಾಡಿಕೊಂಡು ಬೆಳೆ ಸಮೀಕ್ಷೆ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆಯನ್ನು ಸಂಪರ್ಕಿಸುವಂತೆ ಕೃಷಿ ಇಲಾಖೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here