ಒಳಮೊಗ್ರು ಹಾಲು ಉತ್ಪಾದಕರ ಸಂಘದಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು; ಒಳಮೊಗ್ರು ಹಾಲು ಉತ್ಪಾದಕರ ಸಹಕಾರಿ ಸಂಘದಲ್ಲಿ 77ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ನಡೆಯಿತು. ಸಂಘದ ಅಧ್ಯಕ್ಷ ರಕ್ಷಿತ್ ರೈ ಮುಗೇರು ದ್ವಜಾರೋಹಣಗೈದರು. ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕ ನವೀನ್ ರೈ ಬಿಜಳರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಪದಾಧಿಕಾರಿಗಳು, ಸಂಘದ ನಿರ್ದೇಶಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಂಘದ ಕಾರ್ಯದರ್ಶಿ ಶೇಖರ್ ರೈ ಸ್ವಾಗತಿಸಿದರು. ಕೆ ದಿನೇಶ್ ರೈ ಮತ್ತು ವಿಶ್ವನಾಥ ಗೌಡ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here