ಕಾಂಚನ ಶ್ರಿ ಲಕ್ಷ್ಮೀನಾರಾಯಣ ಅನುದಾನಿತ ಹಿ.ಪ್ರಾ.ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

0

ನೆಲ್ಯಾಡಿ: ಕಾಂಚನ ಶ್ರೀ ಲಕ್ಷ್ಮೀನಾರಾಯಣ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು. ಧ್ವಜಾರೋಹಣವನ್ನು ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರು ಇಲ್ಲಿನ ನಿವೃತ್ತ ಗ್ರಂಥಪಾಲಕ ರಾಮಚಂದ್ರರವರು ನೆರವೇರಿಸಿಕೊಟ್ಟರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಸುಪ್ರೀತಾ ಕುಳ್ಳಾಜೆ, ವಿಕ್ರಂ ಯುವಕ ಮಂಡಲದ ಸದಸ್ಯರು, ಪೋಷಕರು, ವಿದ್ಯಾಭಿಮಾನಿಗಳು ಉಪಸ್ಥಿತರಿದ್ದರು. ಧ್ವಜಾರೋಹಣ ಕಾರ್ಯಕ್ರಮದ ನಂತರ ವಿದ್ಯಾರ್ಥಿಗಳಿಂದ ಲೇಝಿಂ ನೃತ್ಯ ಪ್ರದರ್ಶನ ನಡೆಯಿತು.

ನಂತರ ಶಾಲೆಯಿಂದ ಎಲ್ಲಾ ವಿದ್ಯಾರ್ಥಿಗಳ ಪೋಷಕರು, ವಿದ್ಯಾಭಿಮಾನಿಗಳು, ವಿಕ್ರಂ ಯುವಕ ಮಂಡಲದ ಸದಸ್ಯರು ಹಾಗೂ ಶಿಕ್ಷಕರಿಂದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಬೇರೆ ಬೇರೆ ವೇಷಭೂಷಣಗಳನ್ನು ಹಾಕಿದ ವಿದ್ಯಾರ್ಥಿಗಳು, ಘೋಷಣೆಗಳು, ಬ್ಯಾಂಡ್ ಸೆಟ್ ಇವೆಲ್ಲ ಮೆರವಣಿಗೆಗೆ ಮೆರುಗನ್ನು ತಂದುಕೊಟ್ಟಿತು. ನಂತರ ಲಘ ಉಪಾಹಾರ ಸೇವಿಸಿ ಸಭಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯಗುರು ಎ. ಲಕ್ಷ್ಮಣ ಗೌಡ ವಹಿಸಿದ್ದರು, ಮುಖ್ಯ ಅತಿಥಿಯಾದ ರಾಮಚಂದ್ರ ಸರಕಾರಿ ಪ್ರಥಮ ದರ್ಜೆ ಕಾಲೇಜು ಪುತ್ತೂರಿನ ನಿವೃತ್ತ ಗ್ರಂಥಪಾಲಕರು, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಪ್ರೀತಾ ಕುಳ್ಳಾಜೆ, ವಿಕ್ರಂ ಯುವಕ ಮಂಡಲದ ಕಾರ್ಯದರ್ಶಿ ಗಿರೀಶ್ ಮುದ್ಯ, ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸ್ಮಿತಾ, ಶಿಕ್ಷಕಿ ಶ್ರೀಮತಿ ಯಕ್ಷೀತಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮವು ವಿದ್ಯಾರ್ಥಿಗಳ ಪ್ರಾರ್ಥನೆಯೊಂದಿಗೆ ಆರಂಭಗೊಂಡಿತು. ಈ ಸಂದರ್ಭದಲ್ಲಿ ವೇದಿಕೆಯಲ್ಲಿ ವಿದ್ಯಾರ್ಥಿಗಳ ಛದ್ಮ ವೇಷ ಸ್ಪರ್ಧೆ ನಡೆಯಿತು.

ಅತಿಥಿ ರಾಮಚಂದ್ರ ಇವರಿಗೆ ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಲಾಯಿತು. ಶಾಲಾ ವಿದ್ಯಾರ್ಥಿಗಳಾದ ಚರಣ್ .ಎಸ್ ಮತ್ತು ಮೋಕ್ಷಿತ್ ನಾ ಮೆಚ್ಚಿದ ಸ್ವಾತಂತ್ರ್ಯ ಹೋರಾಟಗಾರರ ಬಗ್ಗೆ ಭಾಷಣ ಮಾಡಿದರು. ಶಾಲಾ ಶಿಕ್ಷಕಿ ಶ್ರೀಮತಿ ಯಕ್ಷೀತಾ ಸ್ವಾತಂತ್ರ್ಯ ದಿನಾಚರಣೆಯ ಆಚರಿಸುವ ಹಿನ್ನಲೆ ಮತ್ತು ಪ್ರಸುತ್ತ ಅಭಿವೃದ್ಧಿಯ ಮತ್ತು ನಾವು ದೇಶಕ್ಕೆ ಯಾವ ರೀತಿಯ ಕೊಡುಗೆ ನೀಡಬಹುದು. ಹಾಗೂ ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ ಸ್ವಾತಂತ್ರ್ಯದಿನಾಚರಣೆ ಪ್ರಯುಕ್ತ ನಡೆಸಲಾದ ಸ್ಪರ್ಧೆಗಳ ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಿತು. ವಿಜೇತರ ಪಟ್ಟಿಯನ್ನು ಶಿಕ್ಷಕಿಯಾದ ಶ್ರೀಮತಿ ಭಾಗ್ಯಲಕ್ಷ್ಮಿ ವಾಚಿಸಿದರು.

ಅತಿಥಿಗಳಾದ ರಾಮಚಂದ್ರರವರು ಪ್ರಾಚೀನ ಭಾರತದ ಆಡಳಿತ ವ್ಯವಸ್ಥೆ ಸ್ವಾತಂತ್ರ್ಯದ ಹೋರಾಟದ ಆ ಸಂದರ್ಭದಲ್ಲಿನ ಪರಿಸ್ಥಿತಿ. ಇಂತಹ ಆಡಳಿತ ವ್ಯವಸ್ಥೆಯಲ್ಲಿ ಆಗಿರುವ ಬದಲಾವಣೆ, ಒಟ್ಟು ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನೇ ತಿಳಿಸಿಕೊಟ್ಟರು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾದ ಶ್ರೀಮತಿ ಸುಪ್ರೀತಾ ಕುಳ್ಳಾಜೆ ಇವರು ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯ ಕೋರಿದರು. ಶಾಲಾ ಮುಖ್ಯಗುರು ಎ.ಲಕ್ಷ್ಮಣ ಗೌಡರವರು ಸ್ವಾತಂತ್ರ್ಯ ದಿನಾಚರಣೆಯ ಮಹತ್ವವನ್ನು ತಿಳಿಸಿಕೊಟ್ಟರು. ಸಭಾ ಕಾರ್ಯಕ್ರಮದ ನಂತರ ಎಲ್ಲಾ ವಿದ್ಯಾರ್ಥಿಗಳಿಂದ ಮನೋರಂಜನೀಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು. ವಿಭಿನ್ನ ಶೈಲಿಯ ಜಂಪ್ ರೋಪ್ ಕವಾಯತು ನಡೆಯಿತು. ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಗೀತ ಶಿಕ್ಷಕಿ ಶ್ರೀಮತಿ ಪ್ರತಿಭಾ ಮತ್ತು ನೃತ್ಯ ಶಿಕ್ಷಕಿ ಪೂಜಾ ನಿರೂಪಿಸಿದರು. ಸಂಸ್ಥೆಯ ವತಿಯಿಂದ ಒದಗಿಸಿದ ಮತ್ತು ಊರವರು ಒದಗಿಸಿದ ಲಡ್ಡು, ಸಿಹಿತಿಂಡಿ ಮತ್ತು ಶಾಲಾ ವತಿಯಿಂದ ಭೋಜನದ ವ್ಯವಸ್ಥೆಯನ್ನು ಆಗಮಿಸಿದ ಎಲ್ಲರಿಗೂ ನೀಡಲಾಯಿತು. ಸಹಶಿಕ್ಷಕಿ ಶ್ರೀಮತಿ ಸುಮಾ ಸ್ವಾಗತಿಸಿ, ಕಂಪ್ಯೂಟರ್ ಶಿಕ್ಷಕಿ ಶ್ರೀಮತಿ ಸೌಮ್ಯ ನಿರೂಪಿಸಿ, ಸಹಶಿಕ್ಷಕಿ ಶ್ರೀಮತಿ ವಂದನಾ ಧನ್ಯವಾದಗೈದರು.

LEAVE A REPLY

Please enter your comment!
Please enter your name here