ಪುತ್ತೂರು: ಮಕ್ಕಳ ಪೌಷ್ಟಿಕಾಂಶ ಕೊರತೆಯನ್ನು ನೀಗಿಸಲು ಬಿಸಿಯೂಟದ ಜೊತೆಗೆ 1 ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದ ವತಿಯಿಂದ ಮೊಟ್ಟೆಯನ್ನು ವಿತರಿಸಲು ರಾಜ್ಯಾದ್ಯಂತ ಕ್ರಮ ಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಹೇಳಿದರು. ಸರಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ಮೊಟ್ಟೆ ವಿತರಣಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಈ ಸಂದರ್ಭದಲ್ಲಿ ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ವಿಷ್ಣುಪ್ರಸಾದ್ ಕಾರ್ಯಕ್ರಮದ ಮಹತ್ವದ ಬಗ್ಗೆ ತಿಳಿಸಿ ಶುಭ ಹಾರೈಸಿದರು. ಸಂಸ್ಥೆಯ ಉಪಪ್ರಾಂಶುಪಾಲ ವಸಂತ ಮೂಲ್ಯ ಮಾತನಾಡಿ, ತಾಲೂಕಿನಲ್ಲಿಯೇ ಅತ್ಯಧಿಕ ವಿದ್ಯಾರ್ಥಿಗಳನ್ನು ಹೊಂದಿರುವ ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪೌಷ್ಟಿಕಾಂಶ ಆಹಾರವಾದ ಮೊಟ್ಟೆಯ ಫಲಾನುಭವಿ ವಿದ್ಯಾರ್ಥಿಗಳಾಗಿದ್ದಾರೆ ಎಂದು ಹೇಳಲು ಸಂತೋಷ ಪಡುತ್ತಿದ್ದೇನೆ ಎಂದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ ಸದಸ್ಯ ಚೆನ್ನಪ್ಪ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೋಟಿಯಪ್ಪ ಪೂಜಾರಿ ಸೇರ ಉಪಸ್ಥಿತರಿದ್ದರು. ಶಿಕ್ಷಕ ವೃಂದ, ಕಛೇರಿ ಸಿಬ್ಬಂದಿ ಹಾಗೂ ಅಕ್ಷರ ದಾಸೋಹ ಸಿಬ್ಬಂದಿಯವರು ಕಾರ್ಯಕ್ರಮದಲ್ಲಿ ಪಾಲ್ಗೊಂಡರು.