ಗೋಳಿತ್ತೊಟ್ಟು: ಅಪ್ರಾಪ್ತ ವಯಸ್ಸಿನ ಮಗಳಿಗೆ ಲೈಂಗಿಕ ದೌರ್ಜನ್ಯ -ಪೋಕ್ಸೋ ಕಾಯ್ದೆಯಡಿ ಆರೋಪಿ ಸೆರೆ

0

ನೆಲ್ಯಾಡಿ: ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ತಂದೆಯೇ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿತ್ತೊಟ್ಟು ಗ್ರಾಮದ ಮನಿಪುಲ ಎಂಬಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಆರೋಪಿಯನ್ನು ಪೋಕ್ಸೋ ಪ್ರಕರಣದಲ್ಲಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಆರೋಪಿಯು ಕಳೆದ ಮಾರ್ಚ್ ತಿಂಗಳಿನಲ್ಲಿ ತನ್ನ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯವೆಸಗಿದ್ದ. ಬಾಲಕಿಯ ಅಮ್ಮ, ಅಕ್ಕ, ತಮ್ಮ ಕಳೆದ ಮಾರ್ಚ್ ತಿಂಗಳ 3ನೇ ಅಥವಾ ೪ನೇ ವಾರದ ಒಂದು ದಿನ ಸಂಬಂಧಿಕರ ಮನೆಗೆ ಹೋಗಿದ್ದು, ಬಾಲಕಿ ಪರೀಕ್ಷೆ ಓದಲು ಮನೆಯಲ್ಲಿಯೇ ಉಳಿದುಕೊಂಡಿದ್ದಳು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ಆರೋಪಿ ದುಷ್ಕೃತ್ಯವೆಸಗಿದ್ದ ಎಂದು ಆರೋಪಿಸಲಾಗಿದೆ. ಈ ವಿಚಾರವನ್ನು ಅಮ್ಮನಿಗೆ ಹೇಳಿದರೆ ನಾನು ಹಗ್ಗ ತೆಗೆದುಕೊಂಡು ಸಾಯುತ್ತೇನೆ. ನಿನ್ನನ್ನು ಸಾಯಿಸುತ್ತೇನೆ ಎಂದು ಬೆದರಿಕೆಯೂ ಹಾಕಿದ್ದ. ಆ ಬಳಿಕವೂ ಬಾಲಕಿ ಒಬ್ಬಳೇ ಮನೆಯಲ್ಲಿ ಇದ್ದಾಗ ಆತ 4-5 ಬಾರಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ.

ಆ.15ರಂದು ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸ ಕಂಡುಬಂದಿದ್ದು ಆಕೆಯ ತಾಯಿ ವಿಚಾರಿಸಿದಾಗ ನಡೆದ ವಿಚಾರವನ್ನು ಬಾಲಕಿ ತಾಯಿಗೆ ತಿಳಿಸಿದ್ದಾಳೆ. ಆ.16ರಂದು ಬಾಲಕಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಯ ವೈದ್ಯರಲ್ಲಿ ಪರೀಕ್ಷೆಗೆ ಒಳಪಡಿಸಿದಾಗ ಆಕೆ 5 ತಿಂಗಳ ಗರ್ಭಿಣಿ ಎಂದು ವೈದ್ಯರು ತಿಳಿಸಿ ಒಳರೋಗಿಯಾಗಿ ದಾಖಲು ಮಾಡಿಕೊಂಡಿದ್ದಾರೆ. ಬಾಲಕಿ ನೀಡಿದ ದೂರಿನಂತೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಉಪ್ಪಿನಂಗಡಿ ಪೊಲೀಸರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ 109/2023 IPC: LPE 1860 (U/s376(2)(f),376(2)(n),376(3),506); PROTECTION OF CHILDREN FROM SEXUL OFFENCES ACT 2012 (U/s-6)ಯಂತೆ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here