ಗೋಳಿತೊಟ್ಟು ಶ್ರೀ.ಕ್ಷೇ.ಧ.ಗ್ರಾ.ಯೋ ಸದಸ್ಯರಿಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾಹಿತಿ ಕಾರ್ಯಾಗಾರ

0

ಪುತ್ತೂರು: ಕಡಬ ತಾಲೂಕಿನ ಗೋಳಿತೊಟ್ಟು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಸದಸ್ಯರಿಗೆ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾಹಿತಿ ಕಾರ್ಯಾಗಾರವು ಆ.18ರಂದು ನಡೆಯಿತು.


ಪುತ್ತೂರು ಮಹಿಳಾ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್ ಮಧುಸೂಧನ್ ರಾವ್, ಎಸ್.ಐ ಭವಾನಿಯರು ಮಹಿಳಾ ಪೊಲೀಸ್ ಠಾಣೆಯ ಕೆಲಸ ಕಾರ್ಯಗಳ ಬಗ್ಗೆ ಹಾಗೂ ಪೋಕ್ಸೋ ಕಾಯ್ದೆ, ಕೌಟುಂಬಿಕ ದೌರ್ಜನ್ಯ ಕಾಯಿದೆ ಕುರಿತಂತೆ ಹಾಗೂ ಮಹಿಳಾ ಮತ್ತು ಮಕ್ಕಳ ಸುರಕ್ಷತೆ ಕುರಿತು ಮಾಹಿತಿ ನೀಡಿದರು.

LEAVE A REPLY

Please enter your comment!
Please enter your name here