ಹಿರೇಬಂಡಾಡಿ ಗ್ರಾಮ ಪಂಚಾಯತ್-ಅಧ್ಯಕ್ಷರಾಗಿ ಸದಾನಂದ ಶೆಟ್ಟಿ , ಉಪಾಧ್ಯಕ್ಷರಾಗಿ ಶಾಂಭವಿ ಆಯ್ಕೆ

0

ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾಗಿ ಸದಾನಂದ ಶೆಟ್ಟಿ ಹಾಗೂ ಉಪಾಧ್ಯಕ್ಷರಾಗಿ ಶಾಂಭವಿ ಆಯ್ಕೆಯಾಗಿದ್ದಾರೆ.
ಒಟ್ಟು 15 ಸದಸ್ಯ ಬಲವನ್ನು ಹಿರೇಬಂಡಾಡಿ ಗ್ರಾ.ಪಂ.ನಲ್ಲಿ 11 ಮಂದಿ ಬಿಜೆಪಿ ಬೆಂಬಲಿತ ಸದಸ್ಯರಾಗಿದ್ದು, 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರು. ಇಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸಾಮಾನ್ಯ ಮಹಿಳೆ ಮೀಸಲಾತಿ ಬಂದಿತ್ತು. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯ ಸದಾನಂದ ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯ ಸತೀಶ್ ಶೆಟ್ಟಿ ಎಚ್. ಹಾಗೂ ಉಪಾಧ್ಯಕ್ಣ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಶಾಂಭವಿ ಹಾಗೂ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಗೀತಾ ದಾಸರಮೂಲೆ ನಾಮಪತ್ರ ಸಲ್ಲಿಸಿದ್ದರು. ಕೊನೆಗೆ ಚುನಾವಣೆ ನಡೆದು ಅಧ್ಯಕ್ಷರಾಗಿ ಸದಾನಂದ ಶೆಟ್ಡಿ ಹಾಗೂ ಉಪಾಧ್ಯಕ್ಷರಾಗಿ ಶಾಂಭವಿ ಅವರು ಆಯ್ಕೆಯಾದರು.

LEAVE A REPLY

Please enter your comment!
Please enter your name here