ತಾಲೂಕು ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟ

0

ಪುತ್ತೂರು:ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಡಾ.ಶಿವರಾಮ ಕಾರಂತ ಸರಕಾರಿ ಪ್ರೌಢಶಾಲೆ ಪುತ್ತೂರು ಇದರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ವಲಯ ಮಟ್ಟದ ಪ್ರೌಢಶಾಲಾ ವಿದ್ಯಾರ್ಥಿಗಳ ವಾಲಿಬಾಲ್ ಪಂದ್ಯಾಟವು ಆ.17 ರಂದು ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್ ಮಾತನಾಡಿ, ನಿರ್ದಿಷ್ಟ ಗುರಿ ಮತ್ತು ಪರಿಶ್ರಮ ಇದ್ದರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದು ನುಡಿದರು.


ಡಾ. ಕೆ ಶಿವರಾಮ ಕಾರಂತ ಸರ್ಕಾರಿ ಪ್ರೌಢಶಾಲೆಯ ಕಾರ್ಯಾಧ್ಯಕ್ಷ ದಿನೇಶ್ ಕಾಮತ್ ರವರು ಕಾರ್ಯಕ್ರಮವನ್ನು ಉದ್ಘಾಟಿಸಿ, ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ ಮಾತನಾಡಿ, ಸಿಗುವ ಸದವಕಾಶಗಳನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಸಫಲತೆಯನ್ನು ಸಾಧಿಸುವಂತಾಗಬೇಕು ಎಂದರು.

ತಾಲೂಕು ಸರ್ಕಾರಿ ನೌಕರರ ಸಂಘದ ರಾಜ್ಯಪರಿಷತ್ ಸದಸ್ಯರಾದ ಪುರುಷೋತ್ತಮ ಬಿ. ಮಾತನಾಡಿ, ವಿದ್ಯಾರ್ಥಿಗಳಿಗೆ ಸಾಧನೆಗೆ ಅಸಾಧ್ಯವಾದುದು ಯಾವುದೂ ಇಲ್ಲ ಸಾಧಿಸುವ ಛಲ ಪ್ರತಿಯೊಬ್ಬರಲ್ಲೂ ಇರಬೇಕು ಎಂದು ಶುಭ ಹಾರೈಸಿದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರೀಕ್ಷಣಾಧಿಕಾರಿಗಳಾದ ಸುಂದರ ಗೌಡ ಎನ್,ಪುತ್ತೂರು ವಲಯ ನೋಡಲ್ ಅಧಿಕಾರಿ ಐ.ವಿ ಗ್ರೇಟ್ಟಾ ಪಾಯಿಸ್ ಹಾಗೂ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


ಶಾಲಾ ಮುಖ್ಯೋಪಾಧ್ಯಾಯಿನಿ ಜಲಜಾಕ್ಷಿ ಕೆಎಂ ಸ್ವಾಗತಿಸಿ, ಹಿಂದಿ ಶಿಕ್ಷಕರಾದ ಅಬ್ರಹಾಂ ಎಸ್ ಎ ವಂದಿಸಿದರು. ಕನ್ನಡ ಶಿಕ್ಷಕರಾದ ನಾರಾಯಣ್ ನಾಯ್ಕ್ ಎ ಕಾರ್ಯಕ್ರಮ ನಿರೂಪಿಸಿದರು.


ಬಾಲಕರ ವಿಭಾಗದಲ್ಲಿ ಮೌಂಟನ್ ವ್ಯೂ, ಬಾಲಕಿಯರ ವಿಭಾಗದಲ್ಲಿ ಶಿವರಾಮ ಕಾರಂತ ಪ್ರೌಢಶಾಲೆ ಪ್ರಥಮ..
ಪ್ರೌಢಶಾಲಾ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕರ ವಿಭಾಗದಲ್ಲಿ ಮೌಂಟನ್ ವ್ಯೂ ಆಂಗ್ಲ ಮಾಧ್ಯಮ ಪ್ರೌಢಶಾಲೆ ಸಾಲ್ಮರ , ಹಾಗೂ ಬಾಲಕಿಯರ ವಿಭಾಗದಲ್ಲಿ ಡಾ.ಕೆ ಶಿವರಾಮ ಕಾರಂತ ಸರ್ಕಾರಿ ಪ್ರೌಢಶಾಲೆ ಪುತ್ತೂರು ನಗರ ಪ್ರಥಮ ಸ್ಥಾನವನ್ನು ಮತ್ತು ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದರ್ಬೆ ಮತ್ತು ಸಂತ ವಿಕ್ಟರನ ಆಂಗ್ಲ ಮಾಧ್ಯಮ ಪ್ರೌಢಶಾಲೆ ಕ್ರಮವಾಗಿ ಬಾಲಕರ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ತಾಲೂಕು ದೈಹಿಕ ಶಿಕ್ಷಣ ಪರೀಕ್ಷಣಾಧಿಕಾರಿಗಳಾದ ಸುಂದರ್ ಗೌಡ ಎನ್ ರವರು ವಿಜೇತರ ಟ್ರೋಫಿಗಳ ಪ್ರಾಯೋಜಕತ್ವವನ್ನು ವಹಿಸಿಕೊಂಡಿದ್ದರು.

LEAVE A REPLY

Please enter your comment!
Please enter your name here