ಕುಟ್ರುಪ್ಪಾಡಿ ಗ್ರಾ.ಪಂ. ಅಧ್ಯಕ್ಷರಾಗಿ ಸುಮನ, ಉಪಾಧ್ಯಕ್ಷರಾಗಿ ಯಶೋಧ ಅವಿರೋಧ ಆಯ್ಕೆ

0

ಕಡಬ: ಕುಟ್ರುಪಾಡಿ ಗ್ರಾ.ಪಂ. ಎರಡನೇ ಅವಧಿಗೆ ಅಧ್ಯಕ್ಷರಾಗಿ ಸುಮನ ಹೊಸ್ಮಠ, ಉಪಾಧ್ಯಕ್ಷರಾಗಿ ಯಶೋಧ ಕಾರ್ಕಳ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಅಧ್ಯಕ್ಷ ಸ್ಥಾನ ಅನುಸೂಚಿತ ಜಾತಿ ಮಹಿಳೆ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆಗೆ ಮೀಸಲಾಗಿದೆ. ಒಟ್ಟು 17 ಸದಸ್ಯ ಬಲದ ಪಂಚಾಯತ್‌ನಲ್ಲಿ ಬಿಜೆಪಿ ಬೆಂಬಲಿತ 12 ಸದಸ್ಯರು ಬಿಜೆಪಿ ಬೆಂಬಲಿತ ಸದಸ್ಯರು ಹಾಗೂ 5 ಮಂದಿ ಕಾಂಗ್ರೆಸ್ ಬೆಂಬಲಿತ ಸದಸ್ಯರಿದ್ದಾರೆ.

ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಬೆಂಬಲಿತ ಸದಸ್ಯೆ ಸುಮನ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಸದಸ್ಯೆ ಯಶೋಧ ಅವರು ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ಧಾರೆ. ಚುನಾವಣಾಧಿಕಾರಿಯಾಗಿ ಎಡಮಂಗಲ ಪ್ರೌಡ ಶಾಲೆಯ ಸಹಶಿಕ್ಷಕ ಸಂತೋಷ್ ಎಸ್.ಪಿ. ಅವರು ಆಯ್ಕೆ ಪ್ರಕ್ರಿಯೆ ನಡೆಸಿದರು. ಪಂಚಾಯತ್ ಅಭಿವೃದ್ದಿ ಅಧಿಕಾರಿ ಆನಂದ ಗೌಡ ಹಾಗೂ ಸಿಬ್ಬಂದಿಗಳು ಸಹಕರಿಸಿದರು. ಈ ಸಂದರ್ಭದಲ್ಲಿ ಗ್ರಾ.ಪಂ. ಸದಸ್ಯರು ಹಾಗೂ ಪ್ರಮುಖರಾದ ಪುಲಸ್ತ್ಯ ರೈ, ಟಿ.ಎಂ.ಮ್ಯಾತ್ಯು, ಕ್ಷೇವಿಯರ್ ಬೇಬಿ, ಸತೀಶ್ಚಂದ್ರ ಬೀರುಕ್ಕು, ತನಿಯ ಸಂಪಡ್ಕ, ಶಿವಪ್ರಸಾದ್ ರೈ ಮೈಲೇರಿ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here