ಬಿಳಿನೆಲೆ ಗ್ರಾ.ಪಂ- ಅಧ್ಯಕ್ಷೆ: ಶಾರದಾ ದಿನೇಶ್, ಉಪಾಧ್ಯಕ್ಷ: ಶಿವಶಂಕರ್ ಕೆ.ಅವಿರೋಧ ಆಯ್ಕೆ

0

ಕಡಬ: ಬಿಳಿನೆಲೆ ಗ್ರಾಮ ಪಂಚಾಯತ್‌ನ ಎರಡನೇ ಅವಧಿಯ ಅಧ್ಯಕ್ಷರಾಗಿ ಶಾರದಾ ದಿನೇಶ್ ಹಾಗೂ ಉಪಾಧ್ಯಕ್ಷರಾಗಿ ಶಿವಶಂಕರ್ ಕೆ. ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಿಳಿನೆಲೆ ಗ್ರಾ.ಪಂ.ನ ಒಟ್ಟು 9 ಸ್ಥಾನಗಳಲ್ಲಿ 6 ಸ್ಥಾನ ಕಾಂಗ್ರೆಸ್ ಬೆಂಬಲಿತ ಸದಸ್ಯರು ಹಾಗೂ 3 ಸ್ಥಾನ ಬಿಜೆಪಿ ಬೆಂಬಲಿತ ಸದಸ್ಯರನ್ನು ಹೊಂದಿದೆ. ಸಾಮಾನ್ಯ ಮಹಿಳೆ ಅಧ್ಯಕ್ಷ ಸ್ಥಾನಕ್ಕೆ ಶಾರಾದ ದಿನೇಶ್ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಸ್ಥಾನಕ್ಕೆ ಹಿಂದುಳಿದ ವರ್ಗ ಎ. ಗೆ ಮೀಸಲಾಗಿದ್ದು ಇದಕ್ಕೆ ಶಿವಶಂಕರ್ ಮಾತ್ರ ನಾಮಪತ್ರ ಸಲ್ಲಿಸಿದ್ದು ಅವರು ಅವಿರೋಧ ಆಯ್ಕೆಯಾಗಿದ್ದಾರೆ.


ಈ ಸಂದರ್ಭದಲ್ಲಿ ಸದಸ್ಯರಾದ ಸುಧೀರ್ ಕುಮಾರ್ ಶೆಟ್ಟಿ, ಚಂದ್ರಾವತಿ, ಸತೀಶ್ ಕೆ. ಬೇಬಿ, ಮುರಳೀಧರ, ಭವ್ಯಶ್ರೀ, ಶಾರದಾ ಬಿಳಿನೆಲೆ ಉಪಸ್ಥಿತರಿದ್ದರು. ಚುನಾವಣಾಧಿಕಾರಿಯಾಗಿ ಎಸ್.ಎಸ್.ಪಿ.ಯು.ಕಾಲೇಜಿನ ದೈಹಿಕ ಶಿಕ್ಷಕ ರಾಧಾಕೃಷ್ಣರವರು ಆಯ್ಕೆ ಪ್ರಕ್ರಿಯೆ ನಡೆಸಿದರು. ಪಿ.ಡಿ.ಒ ಶೀನ ಎ. ಹಾಗೂ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು. ಕಾಂಗ್ರೆಸ್ ಮುಖಂಡರಾದ ಕೃಷ್ಣಪ್ಪ ಜಿ. ಜಿ.ಪಂ. ಮಾಜಿ ಸದಸ್ಯರಾದ ಪಿ.ಪಿ.ವರ್ಗೀಸ್, ಸರ್ವೋತ್ತಮ ಗೌಡ ಸೇರಿದಂತೆ ಹಲವಾರು ಮುಖಂಡರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here