ಪುತ್ತೂರು: ಬಿಜೆಪಿಯಿಂದ ತಿರಂಗಾ ಯಾತ್ರೆ

0

ಪುತ್ತೂರು: ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ನಗರ ಮತ್ತು ಗ್ರಾಮಾಂತರ ಮಂಡಲಗಳ ವತಿಯಿಂದ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರಪ್ರೇಮದ ದ್ಯೋತಕವಾಗಿ ‘ತಿರಂಗಾ ಯಾತ್ರೆ’ ಯು ಆ.18ರಂದು ಸಂಜೆ ಪುತ್ತೂರಿನಲ್ಲಿ ನಡೆಯಿತು.


ತಿರಂಗ ಯಾತ್ರೆಯು ಸಂಜೆ ಪುತ್ತೂರು ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಯಾತ್ರೆ ಪ್ರಾರಂಭವಾಯಿತು.


ಮಾಜಿ ಶಾಸಕ ಸಂಜೀವ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದ್ರೆ, ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ,
ಜಿ.ಪಂ ಮಾಜಿ ಅಧ್ಯಕ್ಷೆ ಅಶಾ ತಿಮ್ಮಪ್ಪ ಗೌಡ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ನಿಕಟಪೂರ್ವ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ರಾಜ್ಯ ಪ್ರಕೋಷ್ಠದ ನಿಕಟಪೂರ್ವ ಸಹಪ್ರಭಾರಿ ವಿಶ್ವೇಶ್ವರ ಭಟ್ ಬಂಗಾರಡ್ಕ, ಹಿರಿಯರಾದ ಎಸ್ ಅಪ್ಪಯ್ಯ ಮಣಿಯಾಣಿ, ಬಿಜೆಪಿ ವಿಭಾಗ ಸಹಪ್ರಭಾರಿ ಗೋಪಾಲಕೃಷ್ಣ ಹೇರಳೆ ಸಹಿತ ಹಲಾವರು ಮಂದಿ ಯಾತ್ರೆಯಲ್ಲಿ ಪಾಲ್ಗೊಂಡರು.

LEAVE A REPLY

Please enter your comment!
Please enter your name here