ಕೊಂಬಾರು ಗ್ರಾ.ಪಂ. ಅಧ್ಯಕ್ಷರಾಗಿ ಮಧುಸೂದನ್ ,ಉಪಾಧ್ಯಕ್ಷೆಯಾಗಿ ಸುಜಾತಾ ಅವಿರೋಧ ಆಯ್ಕೆ

0

ಕಡಬ: ಕೊಂಬಾರು ಗ್ರಾ.ಪಂ.ನ ೨ನೇ ಅವಧಿಗೆ ಅಧ್ಯಕ್ಷರಾಗಿ ಮಧುಸೂದನ್ ಓಡೋಳಿ, ಉಪಾಧ್ಯಕ್ಷರಾಗಿ ಸುಜಾತ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಗ್ರಾ.ಪಂ.ನ ಅಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಅಧ್ಯಕ್ಷ ಸ್ಥಾನಕ್ಕೆ ಮಧುಸೂದನ್ ಉಪಾಧ್ಯಕ್ಷ ಸ್ಥಾನಕ್ಕೆ ಸುಜಾತ ಅವರು ನಾಮಪತ್ರ ಸಲ್ಲಿಸಿದ್ದು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಕೊಂಬಾರು ಗ್ರಾ.ಪಂ.ನಲ್ಲಿ 9 ಸದಸ್ಯ ಸ್ಥಾನಗಳಿದ್ದು 9 ಸ್ಥಾನವೂ ಬಿಜೆಪಿ ಬೆಂಬಲಿತ ಸದಸ್ಯರು ಇದ್ದಾರೆ. ಚುನಾವಣಾಧಿಕಾರಿಯಾಗಿ ಸುಬ್ರಹ್ಮಣ್ಯ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರು ಚುನಾವಣಾ ಪ್ರಕ್ರಿಯೆ ನಡೆಸಿದರು. ಪ್ರಭಾರ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಗೌಡ ಹಾಗು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here