ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸತತ ಐದನೇ ಬಾರಿಗೆ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ

0

ನೆಲ್ಯಾಡಿ: ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘವು 2022-23ನೇ ಸಾಲಿನಲ್ಲಿ ಮಾಡಿರುವ ವಿಶೇಷ ಸಾಧನೆಗೆ ದ.ಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ ಸತತ ಐದನೇ ಬಾರಿಗೆ ಪ್ರಶಸ್ತಿಗೆ ಆಯ್ಕೆಯಾಗಿದ್ದು ಆ.19ರಂದು ನಡೆಯುವ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ನಡೆಯಲಿದೆ.


ಸಂಘದಲ್ಲಿ 6034 ಎ ತರಗತಿ ಸದಸ್ಯರಿದ್ದು ರೂ. 7,32,79,350 ಪಾಲು ಬಂಡವಾಳವಿದೆ. ಅಲ್ಲದೆ ಸಿ ತರಗತಿ ಪಾಲು ರೂ.16,830 ಇದೆ. ಒಟ್ಟು ಪಾಲು ಬಂಡವಾಳ ರೂ. 7,32,96,180 ಮತ್ತು ರೂ.27,86,16,461 ಠೇವಣಾತಿ ಇದ್ದು ವರದಿ ವರ್ಷದ ಕೊನೆಗೆ ರೂ.68,18,72,204 ಸದಸ್ಯರ ಹೊರಬಾಕಿ ಸಾಲ ಇರುತ್ತದೆ. 2022-23ನೇ ಸಾಲಿನಲ್ಲಿ ರೂ. 417,90,51,794 ವ್ಯವಹಾರ ನಡೆಸಿದ್ದು ರೂ.1,31,21,496 ನಿವ್ವಳ ಲಾಭಗಳಿಸಿದೆ. ಸಂಘವು ನೆಲ್ಯಾಡಿ, ಕೌಕ್ರಾಡಿ, ಇಚ್ಲಂಪಾಡಿ, ಶಿರಾಡಿ, ಆಲಂತಾಯ, ಗೋಳಿತೊಟ್ಟು, ಕೊಣಾಲು ಎಂಬ ಏಳು ಕಂದಾಯ ಗ್ರಾಮಗಳನ್ನು ಹೊಂದಿದೆ. ಗೋಳಿತ್ತೊಟ್ಟು, ಶಿರಾಡಿ ಮತ್ತು ಇಚ್ಲಂಪಾಡಿಯಲ್ಲಿ ಶಾಖೆಗಳನ್ನು ಹೊಂದಿದೆ. ಶಿರಾಡಿ ಮತ್ತು ಗೋಳಿತ್ತೊಟ್ಟು ಶಾಖೆಯಲ್ಲಿ ಎಲ್ಲಾ ರೀತಿಯ ವ್ಯವಹಾರವಿದ್ದು ಇಚಿಲಂಪಾಡಿಯಲ್ಲಿ ಪಡಿತರ ವ್ಯವಹಾರ ಮಾತ್ರ ಇರುತ್ತದೆ. ಕೇಂದ್ರ ಕಚೇರಿ ಮತ್ತು ಗೋಳಿತ್ತೊಟ್ಟು ಶಾಖೆಯು ಸ್ವಂತ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು ಶಿರಾಡಿ ಶಾಖೆಯು ಬಾಡಿಗೆ ಕಟ್ಟಡದಲ್ಲಿ ವ್ಯವಹಾರ ನಡೆಸುತ್ತಿದೆ. ಪ್ರಸ್ತುತ ವರ್ಷ ಶಿರಾಡಿ ಶಾಖೆಗೆ ಸುಸಜ್ಜಿತವಾದ ಸ್ವಂತ ಕಟ್ಟಡವನ್ನು ನಿರ್ಮಿಸುವ ಯೋಚನೆ ಇರುತ್ತದೆ.


ಸಂಘದ ಆಡಳಿತ ಮಂಡಳಿಯಲ್ಲಿ 12 ಮಂದಿ ಚುನಾಯಿತ ನಿರ್ದೇಶಕರಿದ್ದು ಅಧ್ಯಕ್ಷರಾಗಿ ನಿರಂತರ 28 ವರ್ಷಗಳಿಂದ ಉಮೇಶ್ ಶೆಟ್ಟಿ ಪಟ್ಟೆಯವರು ಕಾರ್ಯನಿರ್ವಹಿಸುತ್ತಿದ್ದಾರೆ. ಉಪಾಧ್ಯಕ್ಷರಾಗಿ ಕಮಲಾಕ್ಷ ಗೌಡ, ನಿರ್ದೇಶಕರುಗಳಾಗಿ ಜಯಾನಂದ ಬಂಟ್ರಿಯಲ್, ಬಾಲಕೃಷ್ಣ ಬಾಣಜಾಲು, ಸರ್ವೋತ್ತಮ ಗೌಡ, ಪ್ರಶಾಂತ ರೈ, ಸುದರ್ಶನ್, ಉಷಾ ಅಂಚನ್, ಸುಲೋಚನಾ ಡಿ., ಅಣ್ಣು ಬಿ, ಸುಮಿತ್ರ, ಗುರುರಾಜ್ ಭಟ್, ವಲಯ ಮೇಲ್ವಿಚಾರಕರಾಗಿ ವಸಂತ ಎಸ್ ಹಾಗೂ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿ ದಯಾಕರ ರೈ ಕೆ ಎಂ.,ರವರು ಕಾರ್ಯನಿರ್ವಹಿಸುತ್ತಿದ್ದಾರೆ


ಪ್ರಶಸ್ತಿ ಪ್ರದಾನ:
ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಕೇಂದ್ರ ಕಚೇರಿಯಲ್ಲಿ ಆ.19ರಂದು ನಡೆಯುವ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಮತ್ತು ಬ್ಯಾಂಕಿನ ನಿರ್ದೇಶಕರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ನಮ್ಮ ಸಹಕಾರಿ ಸಂಘವು ಪ್ರಶಸ್ತಿಗೆ ಆಯ್ಕೆಯಾಗಿರುವುದು ಬಹಳ ಸಂತೋಷ ತಂದಿದೆ. ಈ ಪ್ರಶಸ್ತಿಗೆ ಕಾರಣಕರ್ತರಾದ ನಮ್ಮ ಆಡಳಿತ ಮಂಡಳಿಯ ಎಲ್ಲಾ ನಿರ್ದೇಶಕರು, ಸದಸ್ಯರು, ದ.ಕ.ಜಿಲ್ಲಾ ಕೇಂದ್ರ ಸರಕಾರಿ ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್ ರಾಜೇಂದ್ರ ಕುಮಾರ್‌ರವರಿಗೆ ಹಾಗೂ ನಿರ್ದೇಶಕರಿಗೆ ಮತ್ತು ನಮ್ಮ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮನದಾಳದ ಕೃತಜ್ಞತೆಗಳು.

ಉಮೇಶ್ ಶೆಟ್ಟಿ, ಅಧ್ಯಕ್ಷರು


LEAVE A REPLY

Please enter your comment!
Please enter your name here