ರಾಜ್ಯ ಅಪೆಕ್ಸ್ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಯಾದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ-ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸನ್ಮಾನ

0

ಕಾವು: ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್‌ನಿಂದ ನೀಡಲಾಗುವ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿಗೆ ಆಯ್ಕೆಯಾದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸನ್ಮಾನಿಸಿ ಗೌರವಿಸಲಾಯಿತು.


ಆ.19ರಂದು ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್‌ರವರು ಕಾವು ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮತ್ತು ಮುಖ್ಯಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿಯವರಿಗೆ ಶಾಲು ಹೊದಿಸಿ, ಹಾರಹಾಕಿ, ಸ್ಮರಣಿಕೆ ನೀಡಿ ಗೌರವಿಸಿದರು.


ಈ ಸಂದರ್ಭದಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕಾವು ಸಹಕಾರ ಸಂಘದ ಉಪಾಧ್ಯಕ್ಷ ರಮೇಶ್ ಪೂಜಾರಿ ಮುಂಡ್ಯ, ನಿರ್ದೇಶಕರುಗಳಾದ ಮಂಜುನಾಥ ರೈ ಸಾಂತ್ಯ, ಲೋಕೇಶ್ ಚಾಕೋಟೆ, ಶ್ರೀಧರ್ ರಾವ್ ನಿಧಿಮುಂಡ, ಪ್ರವೀಣ್ ರೈ ಮೇನಾಲ, ರಾಮಣ್ಣ ನಾಯ್ಕ ಕುದ್ರೋಳಿ, ಲೋಹೀತ್ ಅಮ್ಚಿನಡ್ಕ, ಮೋಹನಾಂಗಿ ಬೀಜಂತಡ್ಕ, ಹೇಮಾವತಿ ಚಾಕೋಟೆಯವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here