ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ

0

ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತನ್ನ ವ್ಯವಹಾರ ಕ್ಷೇತ್ರದ ಸಾಧನೆಗಾಗಿ ಸತತ 12 ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್‌ನ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ಆ.19 ರಂದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸೌಧದಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ರವರು ಸವಣೂರು ಸಿ.ಎ.ಬ್ಯಾಂಕಿನ ಅಧ್ಯಕ್ಷ ಗಣೇಶ್ ನಿಡ್ವಣ್ಣಾಯ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ ಪಿ.ರವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸವಣೂರು ಸಿ.ಎ. ಬ್ಯಾಂಕಿನ ಉಪಾಧ್ಯಕ್ಷ ತಾರಾನಾಥ ಕಾಯರ್ಗ, ನಿರ್ದೇಶಕ ಚೇತನ್ ಕುಮಾರ್ ಕೋಡಿಬೈಲು, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವ್ಯವಸ್ಥಾಪನಾ ನಿರ್ದೇಶಕ ಗೋಪಾಲಕೃಷ್ಣ ಭಟ್. ಎಸ್‌ಸಿಡಿಸಿಸಿ ಬ್ಯಾಂಕಿನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here