ಮುಂಡೂರು ಪ್ರಾ.ಕೃ.ಪ.ಸಹಕಾರ ಸಂಘದ ಸಾಧನೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಪ್ರಶಸ್ತಿ

0

ಪುತ್ತೂರು: ಮುಂಡೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು 2022-23ನೇ ಸಾಲಿನಲ್ಲಿ ಬ್ಯಾಂಕಿನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 2022-23ನೇ ಸಾಲಿನ ವಿಶೇಷ ಪ್ರೋತ್ಸಾಹಕ ಬಹುಮಾನ ನೀಡಿ ಗೌರವಿಸಲಾಯಿತು. ಆ.19ರಂದು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಸಂಘದ ಅಧ್ಯಕ್ಷ ಸುರೇಶ್ ಕುಮಾರ್ ಸೊರಕೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಯಪ್ರಕಾಶ್ ರೈ ಚೆಲ್ಯಡ್ಕ ಅವರನ್ನು ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ರವರು ಸನ್ಮಾನಿಸಿ ಗೌರವಿಸಿದರು. ಎಸ್‌ಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ, ದೇವಿಪ್ರಸಾದ್ ಶೆಟ್ಟಿ ಬೆಳಪು, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಪ್ರಸಾದ್ ಕೌಶಲ್ ಶೆಟ್ಟಿ, ಡಿಸಿಸಿ ಬ್ಯಾಂಕ್ ಉಪ ನಿಬಂಧಕ ರಮೇಶ್, ಮುಂಡೂರು ಪ್ರಾ.ಕೃ.ಪ.ಸಹಕಾರಿ ಸಂಘದ ನಿರ್ದೇಶಕರಾದ ಶಿವನಾಥ ರೈ ಮೇಗಿನಗುತ್ತು, ಆನಂದ ಪೂಜಾರಿ ಕೆ, ಸುಧೀರ್‌ಕೃಷ್ಣ ಪಡ್ಡಿಲ್ಲಾಯ, ಕೊರಗಪ್ಪ ಸೊರಕೆ, ಗುಲಾಬಿ ಎನ್ ಶೆಟ್ಟಿ ಕಂಪ ಉಪಸ್ಥಿತರಿದ್ದರು.

ಮುಂಡೂರು ಪ್ರಾ.ಕೃ.ಪ.ಸಹಕಾರಿ ಸಂಘವು ಮುಂಡೂರು, ಸರ್ವೆ, ಕೆಮ್ಮಿಂಜೆ ಕಾರ್ಯವ್ಯಾಪ್ತಿಯನ್ನು ಹೊಂದಿದ್ದು ವ್ಯವಹಾರದಲ್ಲಿ ವಿಶೇಷ ಸಾಧನೆಯನ್ನು ಮಾಡುತ್ತಾ ಬಂದಿರುವ ಸಂಘವು ಕಳೆದ 11 ವರ್ಷಗಳಿಂದ ಸತತವಾಗಿ ಕೇಂದ್ರ ಸಹಕಾರಿ ಬ್ಯಾಂಕಿನಿಂದ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆಯುತ್ತಾ ಬಂದಿದೆ. ಸಾಲ ನೀಡುವಿಕೆ, ವಸೂಲಾತಿ, ಬೆಳೆವಿಮೆ ಮತ್ತು ಇನ್ನಿತರ ವಿಚಾರಗಳಲ್ಲಿ ಉತ್ಕೃಷ್ಠ ಸೇವೆಯನ್ನು ನೀಡುತ್ತಿರುವ ಸಂಘವು ಕೃಷಿಕರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದೆ. ಅಡಿಕೆ ಕೌಶಲ್ಯ ಪಡೆ ತರಬೇತಿ, ಅಡಿಕೆ ಕೃಷಿ ಮಾಹಿತಿ, ರೈತರ ಬೆಳೆ ಸಮೀಕ್ಷೆ, ಪ್ರಾತ್ಯಕ್ಷಿಕೆ, ಕಾರ್ಯಾಗಾರ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ರೈತರ ಹಿತ ಕಾಪಾಡುವಲ್ಲಿ ಯಶಸ್ವಿಯಾಗಿದೆ. ಸಂಘದ ಅಧ್ಯಕ್ಷರ, ಉಪಾಧ್ಯಕ್ಷರ, ನಿರ್ದೇಶಕರ, ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರ, ಸಿಬ್ಬಂದಿಗಳ ಹಾಗೂ ಸದಸ್ಯರ ಸಹಕಾರದಿಂದ ಈ ಸಾಧನೆ ಮಾಡಲು ಸಾಧ್ಯವಾಗಿದೆ.

LEAVE A REPLY

Please enter your comment!
Please enter your name here