ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಎಸ್‌ಸಿಡಿಸಿಸಿ ಬ್ಯಾಂಕ್‌ನಿಂದ ಪ್ರಶಸ್ತಿ

0

ಪುತ್ತೂರು: ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಬ್ಯಾಂಕ್‌ನ ವ್ಯವಹಾರದಲ್ಲಿ ಸಾಧಿಸಿರುವ ಪ್ರಗತಿಯನ್ನು ಗುರುತಿಸಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ 2022-23ನೇ ಸಾಲಿನ ಜಿಲ್ಲಾ ಬ್ಯಾಂಕಿನ ವಿಶೇಷ ಪ್ರೋತ್ಸಾಹಕ ಬಹುಮಾನವನ್ನು ನೀಡಿ ಗೌರವಿಸಿ ಅಭಿನಂದಿಸಲಾಯಿತು. ಆ.19ರಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಸಹಕಾರ ರತ್ನ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಸಂಘದ ಅಧ್ಯಕ್ಷ ಬಾಬು ಶೆಟ್ಟಿ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಧುಕರ ಎಚ್ ಅವರಿಗೆ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ, ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ನರಿಮೊಗರು ಪ್ರಾ.ಕೃ.ಪ.ಸಹಕಾರಿ ಸಂಘದ ಉಪಾಧ್ಯಕ್ಷೆ ಲತಾ ಮೋಹನ್, ನಿರ್ದೇಶಕಿ ನಾಗಮ್ಮ ಬಾಲಕೃಷ್ಣ, ಸಿಬ್ಬಂದಿ ಸಂದೀಪ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನರಿಮೊಗರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ಅನೇಕ ವರ್ಷಗಳಿಂದ ಸತತವಾಗಿ ಉತ್ತಮ ಸಾಧನೆ ಮಾಡುತ್ತಾ ಬರುತ್ತಿದ್ದು ಜಿಲ್ಲಾ ಬ್ಯಾಂಕಿನ ಪ್ರೋತ್ಸಾಹಕ ಬಹುಮಾನವನ್ನು ಪಡೆಯುತ್ತಿದೆ. ಸಾಲ ನೀಡುವಿಕೆ, ವಸೂಲಾತಿ ಮತ್ತು ಇನ್ನಿತರ ಸೇವೆಯಲ್ಲಿ ಉತ್ತಮ ಸಾಧನೆಯನ್ನು ಮಾಡುತ್ತಿದ್ದು ಕೃಷಿಕರಿಗೆ ಉಪಯುಕ್ತ ಮಾಹಿತಿಯನ್ನು ಕೂಡಾ ನೀಡುತ್ತಾ ಬಂದಿದೆ. ಸಂಘದ ಅಧ್ಯಕ್ಷರು, ಉಪಾಧ್ಯಕ್ಷರು, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಘದ ನಿರ್ದೇಶಕರು, ಸಿಬ್ಬಂದಿ ವರ್ಗದವರು ಮತ್ತು ಸದಸ್ಯರು ಸಂಘದ ಯಶಸ್ಸಿನಲ್ಲಿ ಮುಖ್ಯ ಪಾತ್ರ ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here