ಬೆಳಂದೂರು ಈಡನ್ ಗ್ಲೋಬಲ್ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ

0

ಪುತ್ತೂರು: ಈಡನ್ ಗ್ಲೋಬಲ್ ಸ್ಕೂಲ್ ಬೆಳಂದೂರು ಇಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಪ್ರಾರಂಭದಲ್ಲಿ ಪಥ ಸಂಚಲನದ ಮೂಲಕ ಪ್ರಾರಂಭಿಸಲಾಯಿತು. ಶಾಲೆಯ ಆಡಳಿತ ಸಮಿತಿಯ ಅಧ್ಯಕ್ಷ ಅಶ್ರಫ್ ಶಾ ಮಂತೂರು ಧ್ವಜಾರೋಹಣ ನೆರವೇರಿಸಿದ ಬಳಿಕ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.

ಸದಸ್ಯರಾದ ಪುತ್ತುಬಾವ ಹಾಜಿ ಶುಭ ಹಾರೈಸಿದರು. ಶಾಲಾ ಪ್ರಾಂಶುಪಾಲ ರಂಝಿ ಮೊಹಮ್ಮದ್ ಸ್ವಾತಂತ್ರ್ಯ ಸಂದೇಶ ಭಾಷಣ ಮಾಡಿದರು. ಅರೇಬಿಕ್ ವಿಭಾಗದ ಮುಖ್ಯಸ್ಥ ರಶೀದ್ ಸಖಾಫಿ ಉಪಸ್ಥಿತರಿದ್ದರು. ಸ್ವಾತಂತ್ರ್ಯ ದಿನದ ಅಂಗವಾಗಿ ನಡೆದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಿಕ್ಷಕಿ ಅಮೃತಾ ನಾಯ್ಕ್ ನೆರವೇರಿಸಿದರು.


ಬಳಿಕ ಮಕ್ಕಳ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮಾನವ ಪಿರಮಿಡ್ ಕಾರ್ಯಕ್ರಮದ ಆಕರ್ಷಣೀಯ ಅಂಗವಾಗಿತ್ತು. ಕಾರ್ಯಕ್ರಮವನ್ನು ಶಿಕ್ಷಕಿ ದಿವ್ಯ ಎಂ ಸ್ವಾಗತಿಸಿದರು. ಕುಮಾರಿ ಹರ್ಷಿತಾ ಸುವರ್ಣ ಕಾರ್ಯಕ್ರಮ ನಿರೂಪಿಸಿದರು ರಂಜಿತಾ ಕೆ.ವಿ ವಂದಿಸಿದರು. ಕಾರ್ಯಕ್ರಮದಲ್ಲಿ ಮಕ್ಕಳ ಪೋಷಕರು, ಎಲ್ಲಾ ಬೋಧಕ ಮತ್ತು ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here