ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ

0

ಕಡಬ: ಹೊಸಮಠ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ತನ್ನ ವ್ಯವಹಾರ ಕ್ಷೇತ್ರದ ಸಾಧನೆಗಾಗಿ ಎಸ್.ಸಿ.ಡಿ.ಸಿ.ಸಿ. ಬ್ಯಾಂಕ್‌ನ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಆ.19ರಂದು ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಉತ್ಕೃಷ್ಟ ಸೌಧದಲ್ಲಿ ನಡೆದ ಬ್ಯಾಂಕಿನ ಮಹಾಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರು ಹೊಸಮಠ ಸಿ.ಎ. ಬ್ಯಾಂಕಿನ ಅಧ್ಯಕ್ಷಶಿವಪ್ರಸಾದ್ ಪುತ್ತಿಲ, ಮುಖ್ಯ ಕಾರ್‍ಯನಿರ್ವಾಹಣಾಧಿಕಾರಿ ಸೋಮಸುಂದರ ಶೆಟ್ಟಿಯವರಿಗೆ ಪ್ರಶಸ್ತಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಸಿ.ಎ.ಬ್ಯಾಂಕಿನ ಉಪಾಧ್ಯಕ್ಷ ಕೃಷ್ಣಪ್ಪ ದೇವಾಡಿಗ, ನಿರ್ದೇಶಕರಾದ ಶಶಾಂಕ ಗೋಖಲೆ, ಜಯಚಂದ್ರ ರೈ, ಸೀತಾರಾಮ ಡಿ.ಪಿ. ಜಗನ್ನಾಥ ಜಿ.ಯವರು ಉಪಸ್ಥಿತರಿದ್ದರು.

2022-23ನೇ ವರದಿ ವರ್ಷದಲ್ಲಿ ಸಂಘವು ರೂ.14 ಕೋಟಿ ಠೇವಣಿ ಮತ್ತು ರೂ.5.09ಕೋಟಿ ಪಾಲು ಬಂಡವಾಳವನ್ನು ಹೊಂದಿದ್ದು, ವರ್ಷಾಂತ್ಯಕ್ಕೆ ರೂ.42.09 ಕೋಟಿ ಸಾಲ ಹೊರಬಾಕಿ ಇದ್ದು, ಶೇ.95.68 ಸಾಲ ಮರುಪಾವತಿಯಾಗಿರುತ್ತದೆ. ಒಟ್ಟು 212.93 ಕೋಟಿಗಳಷ್ಟು ವ್ಯವಹಾರವನ್ನು ಮಾಡಲಾಗಿದೆ. ವರದಿ ಸಾಲಿನಲ್ಲಿ ದಾಖಲೆಯ ರೂ.125.22 ಲಕ್ಷ ಲಾಭ ಗಳಿಸಿ,ಸದಸ್ಯರ ಆರ್ಥಿಕ ಅವಶ್ಯಕತೆಗಳನ್ನು ಪೂರೈಸಲು ಸಂಘವು ಪ್ರಾಮಾಣಿಕ ಪ್ರಯತ್ನ ಮಾಡಿದೆ. ಸಂಘದ ಕಾರ್ಯವ್ಯಾಪ್ತಿಯಲ್ಲಿ ಅದ್ವಿತೀಯ ಸಾಧನೆಗೈದು ಪ್ರತಿಷ್ಠಿತ ದ.ಕ.ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್, ಮಂಗಳೂರು ಇವರಿಂದ ಉತ್ತಮ ಸಾಧನೆಗೆ ಸತತ ಮೂರನೇ ಬಾರಿ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here