ಪುತ್ತೂರು: ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಗಣನೀಯ ಸಾಧನೆಯನ್ನು ಪರಿಗಣಿಸಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಶಸ್ತಿ ನೀಡಿ ಗೌರವಿಸಿದೆ. ಆ.19ರಂದು ನಡೆದ ಮಹಾಸಭೆಯಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಸಹಕಾರ ರತ್ನ ಡಾ|ಎಂ.ಎನ್. ರಾಜೇಂದ್ರ ಕುಮಾರ್ರವರು ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಧಾ ಬಿ. ರೈರವರಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ನೀಡಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ. ಜಯರಾಮ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಬನ್ನೂರು ರೈತರ ಸೇವಾ ಸಹಕಾರಿ ಸಂಘದ ಉಪಾಧ್ಯಕ್ಷ ರಾಜಶೇಖರ್ ಜೈನ್, ನಿರ್ದೇಶಕ ಸುಂದರ ಪೂಜಾರಿ ಬಡಾವು, ನಿವೃತ್ತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.