ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘಕ್ಕೆ ಪ್ರಶಸ್ತಿ ಪ್ರದಾನ

0

ಪುತ್ತೂರು: ಅರ್ಯಾಪು ಕೃಷಿ ಪತ್ತಿನ ಸಹಕಾರಿ ಸಂಘವು 2022-23 ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆಗಾಗಿ ದ.ಕ.ಜಿಲ್ಲಾ ಸಹಕಾರಿ ಬ್ಯಾಂಕ್ ಪ್ರಶಸ್ತಿಗೆ ಆಯ್ಕೆಯಾಗಿದ್ದು, ಆ.19 ರಂದು ನಡೆದ ಮಹಾಸಭೆಯಲ್ಲಿ ಸಹಕಾರಿ ಸಂಘದ ಅಧ್ಯಕ್ಷ ಎಚ್ ಮಹಮ್ಮದ್ ಅಲಿ ಹಾಗೂ ಮುಖ್ಯ ಕಾರ್ಯ ನಿರ್ವಣಾಧಿಕಾರಿ ಜಯಂತಿ ಬಾಸ್ಕರ್ ರವರಿಗೆ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷರಾದ ಸಹಕಾರಿ ರತ್ನ ಡಾ|ಎಂ ಎನ್ ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ಪ್ರದಾನ ಮಾಡಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಹಕಾರಿ ಇಲಾಖೆಯ ಜಿಲ್ಲಾ ಉಪ ನಿಬಂಧಕರಾದ ರಮೇಶ್, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟು, ಎಸ್ ಬಿ ಜಯರಾಮ ರೈ, ರಾಜರಾಮ್ ಭಟ್, ದೇವಿಪ್ರಸಾದ್ ಶೆಟ್ಟಿ ಬೆಳಪು, ಸದಾಶಿವ ಉಳ್ಳಾಲ್, ಜಿಲ್ಲಾ ಸಹಕಾರಿ ಯುನಿಯನ್ ನ ಅಧ್ಯಕ್ಷ ಕೌಶಲ್ ಪ್ರಸಾದ್ ಶೆಟ್ಟಿ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಎಂಡಿ ಗೋಪಾಲಕೃಷ್ಣ ಭಟ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here