ಕಾಣಿಯೂರು: ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯಲ್ಲಿ ಮಾದಕ ವಸ್ತುಗಳಿಂದಾಗುವ ದುಷ್ಪರಿಣಾಮಗಳು ಹಾಗೂ ಫೋಕ್ಸೋ ಕಾಯಿದೆ ಬಗ್ಗೆ ಅರಿವು ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ಜಯಸೂರ್ಯ ರೈ ಮಾದೋಡಿಯವರು, ಮಾದಕ ವಸ್ತುಗಳಿಂದ ಆಗುವ ದುಷ್ಪರಿಣಾಮಗಳು ಹಾಗೂ ಫೋಕ್ಸೋ ಕಾಯ್ದೆ ಬಗ್ಗೆ ಅರಿವು ಕಾರ್ಯಕ್ರಮವು ನಡೆಯಿತು .
ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರೂ, ನಿವೃತ್ತ ಡಿ ವೈ ಎಸ್ ಪಿ ಆಗಿರುವ ಜಗನ್ನಾಥ ರೈ ನುಳಿಯಾಲು ಮಾತನಾಡಿ, ವಿದ್ಯಾರ್ಥಿಗಳಿಗೆ ಮಾದಕ ವಸ್ತುಗಳ ದುಷ್ಪರಿಣಾಮ ಮತ್ತು ಫೋಕ್ಸೋ ಕಾಯಿದೆ ಬಗ್ಗೆ ಸವಿವರವಾಗಿ ಮನಮುಟ್ಟುವಂತೆ ವಿವರಿಸಿದರು. ಹದಿಹರೆಯದ ಮಕ್ಕಳು ಯಾವುದೇ ದುಶ್ಚಟಕ್ಕೆ ಬಲಿಯಾಗದೆ ತಮ್ಮ ಉಜ್ವಲ ಭವಿಷ್ಯಕ್ಕಾಗಿ ಇಂದಿನಿಂದಲೇ ಉತ್ತಮ ಆಲೋಚನೆಯ ಮೂಲಕ ಕಾರ್ಯಪ್ರವೃತ್ತರಾಗಬೇಕು ಎಂದರು.
ವೇದಿಕೆಯಲ್ಲಿ ಶಾಲಾ ಆಡಳಿತ ಮಂಡಳಿಯ ಸದಸ್ಯರಾದ ನಾಗೇಶ್ ರೈ ಮಾಳ , ಶಾಲಾ ಟ್ರಸ್ಟಿ ವೃಂದಾ ಜೆ ರೈ , ಹರಿ ಚರಣ್ ರೈ , ಶಿಕ್ಷಕರಕ್ಷಕ ಸಂಘದ ಅಧ್ಯಕ್ಷರಾದ ಉಮೇಶ್ ಕೆ ಎಂ ಬಿ, ಉಪಾಧ್ಯಕ್ಷೆ ಜ್ಞಾನೇಶ್ವರಿ , ಮುಖ್ಯಗುರು ಸರಸ್ವತಿ ಎಂ , ಹಿರಿಯ ಶಿಕ್ಷಕಿ ಹೇಮನಾಗೇಶ್ ರೈ ಉಪಸ್ಥಿತರಿದ್ದರು. ಶಾಲಾ ಆಡಳಿತ ಅಧಿಕಾರಿ ವಸಂತ ರೈ ಕಾರ್ಕಳ ಪ್ರಾಸ್ತಾವಿಕ ಮಾತಿನೊಂದಿಗೆ ಸ್ವಾಗತಿಸಿದರು .ಶಿಕ್ಷಕಿ ಅನಿತಾ ಜೆ ರೈ ವಂದಿಸಿದರು.ವಿದ್ಯಾರ್ಥಿನಿ ರಾಶಿ ಕೆ ಸಿ ಪ್ರಾರ್ಥಿಸಿದರು . ಶಿಕ್ಷಕಿ ವಿನಯ ವಿ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.