





ಪುತ್ತೂರು: ಪಡೀಲು ಬಾಳಪ್ಪ ಕಾಂಪ್ಲೆಕ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿರುವ ಪುತ್ತೂರು ಮೂರ್ತೆದಾರರ ಸೇವಾ ಸಹಕಾರಿ ಸಂಘದ ಗಣನೀಯ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರಶಸ್ತಿ ನೀಡಿ ಗೌರವಿಸಲಾಯಿತು.


ಆ.19ರಂದು ಬ್ಯಾಂಕ್ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಸಂಘದ ಮಹಾಸಭೆಯಲ್ಲಿ ಬ್ಯಾಂಕ್ ನ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ಅಧ್ಯಕ್ಷ ಸುಂದರ ಪೂಜಾರಿ ಬಡಾವು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಶಸ್ತಿ ಸ್ವೀಕರಿಸಿದರು. ಸಂಘದ ಸದಸ್ಯರಾದ ವೀರಪ್ಪ ಪೂಜಾರಿ ಡೆಕ್ಕಾಜೆ, ಚಂದಪ್ಪ ಪೂಜಾರಿ ಕಾಡ್ಲ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.















