ರಾಮಕುಂಜ: ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರ ವಾಲಿಬಾಲ್ ಪಂದ್ಯಾಟ

0

ರಾಮಕುಂಜ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಮಕುಂಜ ಇದರ ಜಂಟಿ ಆಶ್ರಯದಲ್ಲಿ ಕಡಬ ವಲಯ ಮಟ್ಟದ ಪ್ರಾಥಮಿಕ ಶಾಲಾ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾಟವು ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ನಡೆಯಿತು.


ಪಂದ್ಯಾಟದಲ್ಲಿ ಬಾಲಕರ 10 ತಂಡ ಹಾಗೂ ಬಾಲಕಿಯರ 6 ತಂಡ ಭಾಗವಹಿಸಿತು. ಬಾಲಕರ ವಿಭಾಗದಲ್ಲಿ ಪ್ರಥಮ ಸ್ಥಾನಿಯಾಗಿ ಮಾರ್ ಇವಾನಿಯೋಸ್ ಕುಂತೂರು, ದ್ವಿತೀಯ ಸ್ಥಾನಿಯಾಗಿ ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ಶಾಲೆ ರಾಮಕುಂಜ, ಬಾಲಕಿಯರ ವಿಭಾಗದಲ್ಲಿ ಸೈಂಟ್ ಆನ್ಸ್ ಕಡಬ ಪ್ರಥಮ ಹಾಗೂ ಗುಡ್ ಶಫರ್ಡ್ ಮರ್ದಾಳ ಶಾಲಾ ತಂಡ ದ್ವಿತೀಯ ಸ್ಥಾನ ಪಡೆದುಕೊಂಡು ತಾಲೂಕು ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ.

LEAVE A REPLY

Please enter your comment!
Please enter your name here