ಮೊಟ್ಟೆತ್ತಡ್ಕ-ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ನಾಗರಪಂಚಮಿ ಆಚರಣೆ

0

ಪುತ್ತೂರು:ಮೊಟ್ಟೆತ್ತಡ್ಕ-ಮಿಶನ್ ಮೂಲೆ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಹಿಂದು ಬಾಂಧವರ ಪವಿತ್ರ ಹಬ್ಬವಾಗಿರುವ ನಾಗರಪಂಚಮಿ ಹಬ್ಬವನ್ನು ಶ್ರದ್ಧಾಭಕ್ತಿಯಲ್ಲಿ ಆಚರಿಸಲಾಯಿತು.


ಭಾರತದ ಹಲವಾರು ಭಾಗಗಳಲ್ಲಿ ಹಿಂದೂ ಬಾಂಧವರು ಶ್ರದ್ಧಾಭಕ್ತಿಯಿಂದ ಆಚರಿಸುವ ಹಬ್ಬ ನಾಗರಪಂಚಮಿ. ಶ್ರಾವಣ ಮಾಸದ ಶುಕ್ಲ ಪಕ್ಷದ ಪಂಚಮಿಯಂದು ಆಚರಿಸಲಾಗುವ ಈ ಹಬ್ಬದಲ್ಲಿ ವಿಶೇಷವಾಗಿ ನಾಗದೇವತೆಯನ್ನು ಪೂಜಿಸಲಾಗುತ್ತದೆ. ನಾಗದೇವರು ಮತ್ತು ದೈವಗಳಿಗೆ ಒಂದಕ್ಕೊಂದು ಅವಿನಾಭಾವ ಸಂಬಂಧವಿದ್ದು ಇಲ್ಲಿ ದೈವಗಳನ್ನು ಪೂಜಿಸುವಂತೆಯೇ ಪವಿತ್ರವಾದ ನಾಗದೇವರನ್ನು ಆರಾಧಿಸಿ ಪೂಜಿಸಿಕೊಂಡು ಬರುವ ಪದ್ಧತಿ ತಲೆತಲಾಂತರಗಳಿಂದಿದೆ.ಈ ನಿಟ್ಟಿನಲ್ಲಿ ದೇವಸ್ಥಾನದ ಅರ್ಚಕರಾದ ಉದಯ ನಾರಾಯಣ ಕಲ್ಲೂರಾಯರವರು ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಪ್ರಭಾರ ಅಧ್ಯಕ್ಷ ರಾಮ ಶೆಟ್ಟಿ, ಕಾರ್ಯದರ್ಶಿ ಕೆ.ಬಿ ಶೇಖರ, ಜೊತೆ ಕಾರ್ಯದರ್ಶಿ ಲಕ್ಷ್ಮಣ ಶೆಟ್ಟಿ, ಖಜಾಂಚಿ ಮೋಹನ್ ಕುಮಾರ್, ಲೆಕ್ಕ ಪರಿಶೋಧಕ ಬಿ. ವಿಶ್ವನಾಥ್ ರೈ ಸಹಿತ ನೂರಾರು ಭಕ್ತರು ಧಾರ್ಮಿಕ ಕಾರ್ಯದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here