ಪಾಣಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಡಿಸಿಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ

0

ಪುತ್ತೂರು: ಪಾಣಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2022-23ನೇ ಸಾಲಿನ ಗಣನೀಯ ಸಾಧನೆಯನ್ನು ಗುರುತಿಸಿ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಆ.19ರಂದು ಡಿಸಿಸಿ ಬ್ಯಾಂಕ್‌ನ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಬ್ಯಾಂಕ್‌ನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರು ಪ್ರಶಸ್ತಿ ನೀಡಿ ಗೌರವಿಸಿದರು. ಸಂಘದ ಅಧ್ಯಕ್ಷ ಪದ್ಮನಾಭ ಬೋರ್ಕರ್ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೀಶ್ ಕುಮಾರ್ ಪ್ರಶಸ್ತಿ ಸ್ವೀಕರಿಸಿದರು. ಪಾಣಾಜೆ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘವು ಸತತ ನಾಲ್ಕು ವರ್ಷಗಳಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡು ಬಂದಿದೆ.
ಪ್ರಶಸ್ತಿ ಪ್ರದಾನ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್‌ಕೌಶಲ್ ಶೆಟ್ಟಿ, ಪಾಣಾಜೆ ಸಿಎ ಬ್ಯಾಂಕ್‌ನ ನಿರ್ದೇಶಕರುಗಳಾದ ಕುಮಾರ ನರಸಿಂಹ ಭಟ್, ರವಿಶಂಕರ್ ಶರ್ಮ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here