ಪುತ್ತೂರು: ನೆ. ಮುಡ್ನೂರು ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆ. 21ರಂದು ನಡೆದಿದ್ದು ಈ ವೇಳೆ ಉಪಾಧ್ಯಕ್ಷರ ಆಯ್ಕೆಯ ಚುನಾವಣೆ ಮತ ಪತ್ರದಲ್ಲಿ ಗೊಂದಲ ಉಂಟಾದ ಘಟನೆ ನಡೆದಿದೆ.
ಅಧ್ಯಕ್ಷರ ಆಯ್ಕೆಯ ಚುನಾವಣೆ ಸರಿಯಾಗಿ ನಡೆದಿದ್ದು ಘೋಷಣೆ ಮಾತ್ರ ಬಾಕಿ ಇತ್ತು.
ಉಪಾಧ್ಯಕ್ಷರ ಮತ ಎಣಿಕೆ ಸಂದರ್ಭ ಅಧ್ಯಕ್ಷ ಸ್ಥಾನದ 2 ಮತ ಪತ್ರ ಕಂಡು ಬಂದ ಹಿನ್ನೆಲೆಯಲ್ಲಿ ಗೊಂದಲ ಉಂಟಾಗಿ ಆಯ್ಕೆ ಘೋಷಣೆ ಬಾಕಿಯಿದ್ದು ಚುನಾವಣೆಯಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಹಾಗೂ ಪುತ್ತಿಲ ಪರಿವಾರ ಬೆಂಬಲಿತ ಸದಸ್ಯರು ಆಕ್ಷೇಪ ವ್ಯಕ್ತಪಡಿಸಿದ್ದು, ಬೇರೆ ಚುನಾವಣಾಧಿಕಾರಿ ಮೂಲಕ ಚುನಾವಣೆ ನಡೆಸುವಂತೆ ಆಗ್ರಹಿಸಿ ಮತದಾನ ಬಹಿಷ್ಕರಿಸಿ ಹೊರ ಹೋಗಿದ್ದಾರೆ. ಆ ಬಳಿಕ ಗ್ರಾಪಂ ಎದುರು ಪ್ರತಿಭಟನೆ ನಡೆಸಿದ್ದಾರೆ.