ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ ಸತತ 10ನೇ ಬಾರಿ ಡಿಸಿಸಿ ಬ್ಯಾಂಕ್ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ

0

ಪುತ್ತೂರು: ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ 2022-23 ನೇ ಸಾಲಿನ ಗಣನೀಯ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ವಿಶೇಷ ಪ್ರೋತ್ಸಾಹಕ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಆ.19 ರಂದು ಡಿಸಿಸಿ ಬ್ಯಾಂಕ್‌ನ ಉತ್ಕೃಷ್ಟ ಸಹಕಾರಿ ಭವನದಲ್ಲಿ ನಡೆದ ಬ್ಯಾಂಕ್‌ನ ಮಹಾಸಭೆಯಲ್ಲಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್‌ರವರು ಪ್ರಶಸ್ತಿ ನೀಡಿ ಗೌರವಿಸಿದರು. ಇರ್ದೆ ಬೆಟ್ಟಂಪಾಡಿ ಸಿಎ ಬ್ಯಾಂಕ್‌ನ ಅಧ್ಯಕ್ಷ ಕೆ.ಎಸ್.ರಂಗನಾಥ ರೈ ಗುತ್ತು, ಮುಖ್ಯಕಾರ್ಯನಿರ್ವಹಣಾಧಿಕಾರಿ ರಾಮಯ್ಯ ರೈ ಬಿ.ಪ್ರಶಸ್ತಿ ಸ್ವೀಕರಿಸಿದರು. ಇರ್ದೆ ಬೆಟ್ಟಂಪಾಡಿ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘವು ಕಳೆದ 10 ವರ್ಷಗಳಿಂದ ಸತತವಾಗಿ ಡಿಸಿಸಿ ಬ್ಯಾಂಕ್‌ನ ವಿಶೇಷ ಪ್ರೋತ್ಸಾಹಕ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್‌ನ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಸಹಕಾರಿ ಯೂನಿಯನ್‌ನ ಜಿಲ್ಲಾಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಇರ್ದೆ ಬೆಟ್ಟಂಪಾಡಿ ಸಿಎ ಬ್ಯಾಂಕ್ ನಿರ್ದೇಶಕ ಕರುಣಾಕರ ಶೆಟ್ಟಿ ಕೊಮ್ಮಂಡ ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here