ಪುತ್ತೂರು:ಪುರಾತನ ಐತಿಹಾಸಿಕ ಕ್ಷೇತ್ರ ಕೆಮ್ಮಿಂಜೆ ಶ್ರೀ ಷಣ್ಮುಖ ಸುಬ್ರಹ್ಮಣ್ಯ ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ ಆ.21ರಂದು ನಾಗರ ಪಂಚಮಿಯ ಅಂಗವಾಗಿ ನಾಗನ ಸನ್ನಿಧಿಯಲ್ಲ ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮಗಳು ನಡೆಯಿತು.ಕ್ಷೇತ್ರದಲ್ಲಿ ಮುಂಜಾನೆಯಿಂದ ಭಕ್ತಾದಿಗಳು ಆಗಮಿಸಿ ಕ್ಷೀರಾಭಿಷೇಕ, ಸೀಯಾಳಾಭಿಷೇಕ, ನಾಗತಂಬಿಲ ಸೇರಿದಂತೆ ವಿವಿಧ ಸೇವೆಗಳನ್ನು ನೆರವೇರಿಸಿ ಕೃತಾರ್ಥರಾದರು.
ತಾಳೆ ಮದ್ದಳೆ:
ನಾಗರ ಪಂಚಮಿಯ ವಿಶೇಷ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಯಕ್ಷಶ್ರೀ ಹವ್ಯಾಸಿ ಬಳಗ ಪುತ್ತೂರು ಇವರಿಂದ ಶರಸೇತು ಬಂಧ ಎಂಬ ಯಕ್ಷಗಾನ ತಾಳ ಮದ್ದಳೆ ನಡೆಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ ಬಳ್ಳಕ್ಕುರಾಯ, ಸಮಿತಿ ಸದಸ್ಯರು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.