ಸುಬ್ರಹ್ಮಣ್ಯ: ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಾಗರ ಪಂಚಮಿಯ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮ ನಡೆಯಿತು.
ದೇವಸ್ಥಾನದಲ್ಲಿ ಪ್ರಾತಃಕಾಲ ಕುಕ್ಕೆಸುಬ್ರಹ್ಮಣ್ಯ ದೇವರಿಗೆ ಶ್ರೀ ದೇವಳದ ಪ್ರಧಾನ ರ‍್ಚಕ ವೇದಮರ‍್ತಿ ಸೀತಾರಾಮ ಎಡಪಡಿತ್ತಾಯರು ವಿಶೇಷ ಪಂಚಾಮೃತ ಮಹಾಭಿಷೇಕ ನೆರವೇರಿಸಿದರು. ಮಧ್ಯಾಹ್ನ ಮಹಾಪೂಜೆಯ ಬಳಿಕ ದೇವಳದ ಅರ್ಚಕ ವೇದಮರ‍್ತಿ ಸತ್ಯನಾರಾಯಣ ನೂರಿತ್ತಾಯರು ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿ ನಾಗರಾಜನಿಗೆ ವಿಶೇಷ ಕ್ಷೀರಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಜಲಾಭಿಷೇಕ, ಮಹಾಮಂಗಳಾರತಿ ನೆರವೇರಿಸಿ ಪ್ರಸಾದ ವಿತರಿಸಿದರು.
ದೇವಳದ ಹೊರಾಂಗಣದಲ್ಲಿರುವ ನಾಗಪ್ರತಿಷ್ಠಾ ಮಂಟಪದಲ್ಲಿ ನಾಗರಾಜನಿಗೆ ಹಾಲು ಮತ್ತು ಎಳನೀರಿನ ಅಭಿಷೇಕ ಶ್ರದ್ಧಾ ಭಕ್ತಿಯಿಂದ ನೆರವೇರಿತು. ತನುವಿನೊಂದಿಗೆ ಹಿಂಗಾರ ಇತ್ಯಾದಿಗಳನ್ನು ಭಕ್ತರು ಸರ‍್ಪಿಸಿದರು.
ಈ ಸಂದರ್ಭ ಶ್ರೀ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮೋಹನರಾಂ ಎಸ್ ಸುಳ್ಳಿ, ಕರ‍್ಯನರ‍್ವಹಣಾಧಿಕಾರಿ ಡಾ.ನಿಂಗಯ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಪ್ರಸನ್ನ ರ‍್ಬೆ, ಶ್ರೀವತ್ಸ ಬೆಂಗಳೂರು, ಪಿಜಿಎಸ್ಎನ್ ಪ್ರಸಾದ್, ಮನೋಹರ ರೈ, ಲೋಕೇಶ್ ಮುಂಡುಕಜೆ, ವನಜಾ.ವಿ.ಭಟ್, ಶೋಭಾ ಗಿರಿಧರ್, ದೇವಳದ ಅಧೀಕ್ಷಕ ಪದ್ಮನಾಭ ಶೆಟ್ಟಿಗಾರ್ ಸೇರಿದಂತೆ ಭಕ್ತರು ಉಪಸ್ಥಿತರಿದ್ದರು.