ಪುತ್ತೂರು ಜುಮ್ಮಾ ಮಸೀದಿಯ ಮಾಜಿ ಅಧ್ಯಕ್ಷ ಹಿರಿಯ ಕಾಂಗ್ರೆಸಿಗರೂ ಆದ ಬೆದ್ರಾಳ ನಿವಾಸಿ ಎಸ್ ಇಸ್ಮಾಯಿಲ್ ಹಾಜಿ ಬೆದ್ರಾಳ (80ವ.) ಎಂಬವರು ಅಲ್ಪ ದಿನದ ಅನಾರೋಗ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮುಕ್ವೆ ಮಸೀದಿಯ ಆಡಳಿತ ಕಮಿಟಿಯಲ್ಲಿ ಸುಮಾರು 25 ವರ್ಷಗಳ ಕಾಲ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಅವರು `ಶಿಬರ ಮೋನುಚ್ಚ’ ಎಂದೇ ಚಿರಪರಿಚಿತರಾಗಿದ್ದರು. ಮೃತರು ಓರ್ವ ಪುತ್ರ, ನಾಲ್ಕು ಮಂದಿ ಪುತ್ರಿಯರನ್ನು ಅಗಲಿದ್ದಾರೆ ಮೃತರ ಮನೆಗೆ ಶಾಸಕ ಅಶೋಕ್ ಕುಮಾರ್ ರೈ ಸೇರಿದಂತೆ ಹಲವಾರು ಗಣ್ಯರು ಭೇಟಿ ನೀಡಿ ಸಂತಾಪ ಸೂಚಿಸಿದರು.