ಸರ್ವೆ ಕಲ್ಪಣೆ ಪ್ರೌಢ ಶಾಲೆಯಲ್ಲಿ ಸವಣೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟ ಉದ್ಘಾಟನೆ

0

ಪುತ್ತೂರು: ಸವಣೂರು ವಲಯ ಮಟ್ಟದ ಪ್ರೌಢ ಶಾಲಾ ಬಾಲಕ, ಬಾಲಕಿಯರ ಕಬಡ್ಡಿ ಪಂದ್ಯಾಟ ಆ.22ರಂದು ಸರ್ವೆ ಕಲ್ಪಣೆ ಸರಕಾರಿ ಪ್ರೌಢ ಶಾಲೆಯಲ್ಲಿ ಆಯೋಜನೆಗೊಂಡಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಂಡೂರು ಗ್ರಾ.ಪಂ ಮಾಜಿ ಅಧ್ಯಕ್ಷ ಎಸ್.ಡಿ ವಸಂತ ನೆರವೇರಿಸಿದರು. ಮುಂಡೂರು ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರ ಎನ್‌ಎಸ್‌ಡಿ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶಾಲಾ ಕಾರ್ಯಾಧ್ಯಕ್ಷ ಸಿದ್ದೀಕ್ ಸುಲ್ತಾನ್ ಕೂಡುರಸ್ತೆ, ಮಾಜಿ ಕಾರ್ಯಾಧ್ಯಕ್ಷ ಶಿವನಾಥ ರೈ ಮೇಗಿನಗುತ್ತು, ಮಾಜಿ ಕಾರ್ಯಾಧ್ಯಕ್ಷರು, ಮುಂಡೂರು ಗ್ರಾ.ಪಂ ಸದಸ್ಯರಾದ ಕರುಣಾಕರ ಗೌಡ ಎಲಿಯ, ಮುಂಡೂರು ಗ್ರಾ.ಪಂ ಸದಸ್ಯರಾದ ಮಹಮ್ಮದ್ ಆಲಿ ಹಾಗೂ ರಸಿಕಾ ರೈ, ಮಾಜಿ ಸದಸ್ಯ ರಾಮಚಂದ್ರ ಸೊರಕೆ, ಸರ್ವೆ ಕಲ್ಪಣೆ ಪ್ರಾಥಮಿಕ ಶಾಲಾ ಎಸ್‌ಡಿಎಂಸಿ ಅಧ್ಯಕ್ಷ ಕೆ.ಎಂ ಹನೀಫ್ ರೆಂಜಲಾಡಿ, ಮುಂಡೂರು ಸಿ.ಎ ಬ್ಯಾಂಕ್ ನಿರ್ದೇಶಕ ಕೊರಗಪ್ಪ ಸೊರಕೆ, ಅಕ್ಷರ ದಾಸೋಹ ಕೇಂದ್ರದ ಸಹಾಯಕ ನಿರ್ದೇಶಕರಾದ ವಿಷ್ಣುಪ್ರಸಾದ್, ಸಮೂಹ ಸಂಪನ್ಮೂಲ ಕೇಂದ್ರದ ಸಂಯೋಜಕ ನವೀನ್ ವೇಗಸ್, ನಿವೃತ್ತ ಮುಖ್ಯಗುರು ಮಹಾಬಲ ರೈ, ಸವಣೂರು ವಲಯ ಮಟ್ಟದ ಕ್ರೀಡಾಕೂಟದ ನೋಡೆಲ್ ಅಧಿಕಾರಿ ಬಾಲಕೃಷ್ಣ, ದೈ.ಶಿ.ಶಿಕ್ಷಕ ನವೀನ್ ಕುಮಾರ್ ರೈ, ಸರ್ವೆ ಕಲ್ಪಣೆ ಪ್ರೌಢ ಶಾಲಾ ಎಸ್‌ಡಿಎಂಸಿ ಸದಸ್ಯರಾದ ಅಬ್ದುಲ್ ಅಝೀಝ್ ರೆಂಜಲಾಡಿ, ಸರೋಜಿನಿ, ಸವಿತಾ, ಕಲ್ಪಣೆ ಆದಿಬ್ರಹ್ಮ ಮೊಗೇರ್ಕಳ ಸೇವಾ ಸಮಿತಿಯ ಮುಖಂಡ ಗಣೇಶ್ ನೇರೋಳ್ತಡ್ಕ, ಹನೀಫ್ ಕಲ್ಪಣೆ, ಶಾಲಾ ನಾಯಕ ಮೋಕ್ಷಿತ್ ಉಪಸ್ಥಿತರಿದ್ದರು.

ಶಾಲಾ ಮುಖ್ಯಗುರು ಜಯರಾಮ ಶೆಟ್ಟಿ ಕೆ ಸ್ವಾಗತಿಸಿದರು. ಶಾಲಾ ದೈ.ಶಿ.ಶಿಕ್ಷಕ ಸಹದೇವ್ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಶಿಕ್ಷಕ ಉದಯ ಕುಮಾರ್ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೆಂಕಟೇಶ್, ಶಿಕ್ಷಕಿಯರಾದ ಕಾಂಚನ ಕೆ, ಉಮೇರಾ ತಬಸ್ಸಂ, ಹರ್ಷಿತ, ಕಮಲ ವಿವಿಧ ಕಾರ್ಯಕ್ರಮ ನಿರ್ವಹಿಸಿದರು.

LEAVE A REPLY

Please enter your comment!
Please enter your name here