ವರಮಹಾಲಕ್ಷ್ಮೀ ವಿಶೇಷ – ಮುಜರಾಯಿ ದೇವಸ್ಥಾನಗಳಲ್ಲಿ ಅರಸಿನ ಕುಂಕುಮ ವಿತರಣೆ ಸುತ್ತೋಲೆ

0

ಪುತ್ತೂರು: ಈ ಬಾರಿಯೂ ವರಮಹಾಲಕ್ಷ್ಮಿ ವ್ರತವನ್ನು ಮುಜರಾಯಿ ಇಲಾಖೆಯ ವತಿಯಿಂದ ವಿಶೇಷವಾಗಿ ಆಚರಿಸಲು ನಿರ್ಧರಿಸಲಾಗಿದೆ. ಅಂದಿನ ದಿನ ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ, ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಧಾರ್ಮಿಕ ಧತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.
’ಭಾರತೀಯ ಸಂಸ್ಕೃತಿಯಲ್ಲಿ ಮಹಿಳೆಯರಿಗೆ ಬಹಳ ಮಹತ್ವಪೂರ್ಣವಾದ ಸ್ಥಾನವನ್ನು ನೀಡಿ ಗೌರವಿಸಲಾಗುತ್ತದೆ. ಪ್ರತಿ ವರ್ಷ ವರಮಹಾಲಕ್ಷ್ಮಿ ವ್ರತ, ಸ್ವರ್ಣಗೌರಿ ವ್ರತ ಮತ್ತು ನವರಾತ್ರಿಗಳಲ್ಲೀಯೂ ಸ್ತ್ರೀ ದೇವತೆಯನ್ನು ಪೂಜಿಸಿ ಆರಾಧಿಸಲಾಗುತ್ತದೆ. ವರಮಹಾಲಕ್ಷ್ಮಿ ವ್ರತದ ದಿನದಂದು ಮಹಿಳೆಯರು ಮನೆಯಲ್ಲಿ ಪೂಜೆಯನ್ನು ನೆರವೇರಿಸಿ ದೇವಾಲಯಗಳಿಗೆ ಭೇಟಿ ನೀಡಿ ದೇವರ ಪ್ರಸಾದ ಸ್ವೀಕರಿಸುವ ಸಂಪ್ರದಾಯವಿದೆ’. ಈ ನಿಟ್ಟಿನಲ್ಲಿ ದೇವಾಲಯಗಳಿಗೆ ಆಗಮಿಸುವಂತಹ ಮಹಿಳೆಯರಿಗೆ ಉತ್ತಮ ಗುಣಮಟ್ಟದ ಕಸ್ತೂರಿ ಅರಿಶಿಣ-ಕುಂಕುಮ ಮತ್ತು ಹಸಿರು ಬಳೆಗಳನ್ನು ಗೌರವ ಸೂಚಕವಾಗಿ ನೀಡಬೇಕು ಎಂದು ಧಾರ್ಮಿಕ ಧತ್ತಿ ಇಲಾಖೆಯ ಆಯುಕ್ತರು ಸುತ್ತೋಲೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here